ಭಟ್ಕಳ (Bhatkal): ಕಂದಾಯ ಇಲಾಖೆಯ (Revenue Department) ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಭಟ್ಕಳದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದ್ದಾರೆ (memorandum).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಕುರಿತು ನ್ಯಾಯ ಒದಗಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಕಂದಾಯ ಸಚಿವ (Revenue Minister) ಕೃಷ್ಣಬೈರೇಗೌಡ (Krishna Byregowda) ರವರಿಗೆ ಉತ್ತರ ಕನ್ನಡ (Uttara Kannada) ಜಿಲ್ಲಾ ಹಾಗೂ ಭಟ್ಕಳ ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಕಪ್ಪುಪಟ್ಟಿ ಧರಿಸಿ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಮೂಲಕ ಮನವಿ (memorandum) ಸಲ್ಲಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳ ವಿರುದ್ಧ ಆದೇಶಗಳ ವಿರುದ್ದವಾಗಿ ತೆಗೆದುಕೊಂಡಿರುವ ಕ್ರಮಗಳನ್ನು ರದ್ದುಪಡಿಸದಿದ್ದರೆ ಹಾಗೂ ಇಬ್ಬರನ್ನೂ ವರ್ಗಾವಣೆ ಮಾಡದಿದ್ದಲ್ಲಿ ಫೆ.೩ರಿಂದ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬಗೆಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಿದ್ದಾರೆ. ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Namadhari Guru/ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಶ್ರೀಗಳು

ಇದೇ ಸಂದರ್ಭದಲ್ಲಿ ಕುಮಟಾ (Kumta) ತಾಲೂಕಾಡಳಿತ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ವಕೀಲ ಗಿರೀಶ ನಾಯ್ಕ ಎಂಬುವರು ನಾಯಿ ಎಂದು ಆಕ್ಷೇಪಾರ್ಹವಾಗಿ ಬೈದು, ನಿಂದಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಚಾಂದ ಬಾಷಾ, ತಾಲೂಕು ಸಂಘದ ಅಧ್ಯಕ್ಷೆ ಲತಾ ನಾಯ್ಕ, ಗೌರವಾಧ್ಯಕ್ಷ ಕೆ ಶಂಭು, ಜಿಲ್ಲಾ ಖಜಾಂಚಿ ಚರಣ ಗೌಡ, ಸಂಘಟನೆ ಕಾರ್ಯದರ್ಶಿ ಗಣೇಶ ಕುಲಾಲ, ಸದಸ್ಯರಾದ  ವಿನುತ, ಶ್ರುತಿ ದೇವಾಡಿಗ, ಭೀಮಣ್ಣ, ಶಬಾನ ಬಾನು, ದೀಕ್ಷಿತ, ದೀಪ್ತಿ, ವೀಣಾ, ಐಶ್ವರ್ಯ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : Martyrs’ Day / ಭಟ್ಕಳ ನ್ಯಾಯಾಲಯದಲ್ಲಿ ಹುತಾತ್ಮರ ದಿನಾಚರಣೆ