ಭಟ್ಕಳ (Bhatkal) : ತಾಲೂಕಿನ ಮುಟ್ಟಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ (Childrens Market) ನಡೆಯಿತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲ್ಯಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಮಕ್ಕಳ ಮಕ್ಕಳ ಸಂತೆ ಗಮನ ಸೆಳೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸರಕಾರಿ ಶಾಲೆಗಳಲ್ಲಿ (Government School) ಉತ್ತಮ ಗುಣಮಟ್ಟದ ಶಿಕ್ಷಣ (Education) ನೀಡುವ ಸಲುವಾಗಿ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಸಮುದಾಯದ ಸಹಕಾರದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ವಿನೂತನವಾಗಿ ಮಕ್ಕಳ ಸಂತೆಯನ್ನು (Childrens Market) ಆಯೋಜಿಸಲಾಗಿತ್ತು. ಶಾಲೆಯ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಸಂತೆಯನ್ನು ವಿಶೇಷ ಚೇತನ ವಿದ್ಯಾರ್ಥಿಗಳು ಚಾಲನೆ ನೀಡಿದರು. ಶಾಲಾ ಮಕ್ಕಳಿಗೆ ವ್ಯಾವಹಾರಿಕ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸಂತೆಯಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಇದನ್ನೂ ಓದಿ : Namma Clinic/ ಉಚಿತ ಚಿಕಿತ್ಸಾ ಶಿಬಿರ ಯಶಸ್ವಿ
ಈ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಸ್ಥಳೀಯವಾಗಿ ಸಿಗುವ ತರಹೇವಾರಿ ತರಕಾರಿಗಳು, ಹಣ್ಣುಗಳು, ಸೊಪ್ಪುಗಳು, ಧಾನ್ಯಗಳು, ಮನೆಯಲ್ಲಿಯೇ ತಯಾರಿಸಿದ ತಿಂಡಿ ತಿನಿಸುಗಳು, ತರಕಾರಿ ಹಣ್ಣು ಮತ್ತು ಧಾನ್ಯಗಳ ಜ್ಯೂಸ್ ಗಳು, ಮಜ್ಜಿಗೆ ಮುಂತಾದವುಗಳನ್ನು ತುಂಬಾ ಉತ್ಸಾಹದಿಂದ ಮಾರಾಟ ಮಾಡಿದರು. ಇತರ ದಿನಬಳಕೆ ವಸ್ತುಗಳನ್ನು ಮಾರಾಟ ಮಾಡಿ ಲಾಭ ,ನಷ್ಟದ ಪರಿಕಲ್ಪನೆ ಮತ್ತು ಸಾರ್ವಜನಿಕರೊಂದಿಗೆ ವ್ಯವಹರಿಸುವ ವಿಧಾನದ ಬಗ್ಗೆ ತಿಳಿದುಕೊಂಡರು. ವಾರದ ಸಂತೆಯೊಳಗಿನ ಎಲ್ಲಾ ಅಂಶಗಳು ಮಕ್ಕಳ ಸಂತೆಯಲ್ಲಿ ಮಿಳಿತವಾಗಿತ್ತು.
ವಿಡಿಯೋ ಸಹಿತ ಇದನ್ನೂ ಓದಿ : Rathotsava / ಶ್ರೀ ಕ್ಷೇತ್ರ ಕಿತ್ರೆಯಲ್ಲಿ ರಥೋತ್ಸವ ಸಂಪನ್ನ
ಮಕ್ಕಳ ಪಾಲಕರು, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಊರ ನಾಗರಿಕರು, ಪಂಚಾಯತ್ ಸದಸ್ಯರು ಸಂತೆಗೆ ಆಗಮಿಸಿ ಮಕ್ಕಳಿಂದ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಸಂತೆಯಲ್ಲಿ ಜಂಕ್ ಫುಡ್ ಗಳ ಮಾರಾಟಕ್ಕೆ ಅವಕಾಶ ಇರಲಿಲ್ಲ. ಸಾಧ್ಯವಾದಷ್ಟು ಪ್ಲಾಸ್ಟಿಕ್ ನ ಬಳಕೆಯನ್ನು ಕಡಿಮೆ ಮಾಡಲಾಗಿತ್ತು.
ಕುತೂಹಲಕ್ಕೆಂದು ಬಂದ ಗ್ರಾಮದ ನಿವಾಸಿಗಳು ಬ್ಯಾಗ್ ಹಿಡಿದು ಮಕ್ಕಳೊಂದಿಗೆ ಚರ್ಚಿಸಿ ವ್ಯಾಪಾರ ಮಾಡುವ ಮೂಲಕ ವಾರದ ಸಂತೆಯನ್ನು ಮಕ್ಕಳ ಸಂತೆಯಲ್ಲೆ ಮುಗಿಸುವ ಧಾವಂತ ತೋರಿದ್ದು ವಿಶೇಷ ಆಗಿತ್ತು.
ಇದನ್ನೂ ಓದಿ : Dharwad/ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮಹಿಳೆ ಸಾವು
ಮಕ್ಕಳ ಸಂತೆಗೆ ಆಗಮಿಸಿದ್ದ ಸಿ ಆರ್ ಪಿ ಜಯಶ್ರೀ ಆಚಾರ್ಯ, ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ. ರವಿ ನಾಯ್ಕ ಮಕ್ಕಳ ಸಂತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಪಾಲಕರ ಪರವಾಗಿ ವಿದ್ಯಾ ನಾಯ್ಕ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆ, ಸರ್ಕಾರಿ ಶಾಲೆಗಳು ಉಳಿಯಲು ಇಂತಹ ಹಲವಾರು ಕಾರ್ಯಕ್ರಮ ಶಿಕ್ಷಕರು ರೂಪಿಸಬೇಕಿದೆ. ಕೇವಲ ಪಠ್ಯ ಸಾಕು ಎನ್ನದೆ ಪಠ್ಯೇತರ ಚಟುವಟಿಕೆಗಳಿಗೆ ಗಮನವಿರಲಿ. ಖುಷಿಯಿಂದ ಶಾಲೆಗೆ ಬರಲು ಪಠ್ಯದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೆ ಮುಂದಾಗಬೇಕು ಎಂದರು.
ಇದನ್ನೂ ಓದಿ : Yakshagana week/ ಪೌರಾಣಿಕ ಯಕ್ಷಗಾನ ಸಪ್ತಾಹಕ್ಕೆ ಚಾಲನೆ
ಒಟ್ಟಿನಲ್ಲಿ ವಾರದ ಸಂತೆಗಿಂತ ಕಡಿಮೆ ಏನೂ ಇಲ್ಲ ಎಂಬಂತೆ ಈ ಮಕ್ಕಳ ಸಂತೆಯು ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ, ಎಸ್ ಡಿ ಎಂ ಸಿ ಅಧ್ಯಕ್ಷ ಅನಂತ ನಾಯ್ಕ, ಉಪಾಧ್ಯಕ್ಷೆ ಶೈಲಾ ನಾಯ್ಕ ಪಂಚಾಯತ್ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ, ಶಿಕ್ಷಕರಾದ ಗಂಗಾ ಮೊಗೇರ, ಗಜಾನನ ನಾಯ್ಕ, ಲತಾ ನಾಯ್ಕ, ವಿಜಯ ಕುಮಾರ, ದೀಪಾ ದೇವಡಿಗ, ಪಾಲಕ-ಪೋಷಕರು ಸೇರಿದಂತೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಕ್ಕಳ ಸಂತೆಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ಸಹಿತ ಇದನ್ನೂ ಓದಿ : BJP Celebration/ ಭಟ್ಕಳದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ