ಕಾರವಾರ (Karwar) : ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ರಾಷ್ಟ್ರೀಯ ಹೆದ್ದಾರಿ (National Highway) -೬೬ ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸರ್ವೆ ಕಾರ್ಯದ ನಿಮಿತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ  ಸರ್ವೆ (Survey) ಕಾರ್ಯ ನಡೆಯಲಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸರ್ವೆ (Survey) ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ ೨೦೨೩ ಕಲಂ ೧೬೩ ರನ್ವಯ ಫೆಬ್ರವರಿ ೨೫ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೯ ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆ ೨೦೨೩ ಕಲಂ ೧೬೩ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ (DC Order).

ಇದನ್ನೂ ಓದಿ : Women protest/ ಸಮುದ್ರಕ್ಕೆ ಹಾರಿದ ಮಹಿಳೆಯರು, ಮೂವರು ಅಸ್ವಸ್ಥ

ನಿಷೇಧಾಜ್ಞೆ ಅವಧಿಯಲ್ಲಿ, ಗರಿಷ್ಟ/ಕನಿಷ್ಠ ೫ ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಧರಣಿ ಹಾಗೂ ಪ್ರತಿಭಟನೆ ಉದ್ದೇಶಕ್ಕೆ ಸೇರುವುದನ್ನು ಹಾಗೂ ಸಾರ್ವಜನಕರಿಗೆ ತೊಂದರೆಯಿಂಟಾಗುವಂತೆ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳು/ಗುಂಪುಗಳು ಆಯುಧ, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಕುಡುಗೋಲುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಇದನ್ನೂ ಓದಿ : DC Order/ ಈ ಗ್ರಾಮಗಳಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ?

ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Bhajane/ ಸಪ್ತ ಪ್ರಹರ ಭಜನಾ ಕಾರ್ಯಕ್ರಮ