ಕಾರವಾರ (Karwar) : ಕರ್ನಾಟಕ (Karnataka) ಜಾನಪದ ಅಕಾಡೆಮಿ (janapada academy) ವತಿಯಿಂದ ಜಾನಪದ ಕಲೆಗಳಿಗೆ ತನ್ನನ್ನು ತಾನು ಸಮರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ, ಜಾನಪದ ತಜ್ಞರಿಗೆ ೨೦೨೪ ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ರಾಜ್ಯದ ೩೦ ಜಿಲ್ಲೆಗಳಿಂದ ೩೦ ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ ನೀಡಲಾಗುತ್ತಿದೆ. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ.೨೫,೦೦೦ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುತ್ತಿದೆ. ೨೦೨೪ ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ (Janapada academy) ವಾರ್ಷಿಕ ಪ್ರಶಸ್ತಿಗೆ, ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಶ್ರೀಕಾರ ಗ್ರಾಮದ ಗಣಪು ಬಡವಾ ಗೌಡ ಅವರಿಗೆ ಹಾಲಕ್ಕಿ (Halakki) ಸುಗ್ಗಿ ಕುಣಿತ (Suggi Dance) ಕಲೆಗೆ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ : Dead Body/ ಸಮುದ್ರದಲ್ಲಿ ತೇಲುತ್ತಿದ್ದ ಶವ ಪತ್ತೆ