ಕಾರವಾರ (Karwar): ಕರ್ನಾಟಕ ಸರ್ಕಾರ (Karnataka Government), ಉತ್ತರ ಕನ್ನಡ (Uttara Kannada) ಜಿಲ್ಲಾ ಪಂಚಾಯತ,  ಶಾಲಾ ಶಿಕ್ಷಣ ಇಲಾಖೆ, ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ  ಆಶ್ರಯದಲ್ಲಿ ‘ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಕ್ರೀಡೆ ಮತ್ತು ಅರಿವು ಕಾರ್ಯಕ್ರಮʼ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರವಾರ (Karwar)ತಾಲೂಕಿನ ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ (Karnataka Public School) ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ (SSLC Student) ಭುವನ ಶೇಖರ ಬಾಂದೇಕರ ಉತ್ತಮ ಸಾಧನೆ ಮಾಡಿದ್ದಾನೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಓದುವಿಕೆ ಸ್ಪರ್ಧೆ, ಕಥೆ ಹೇಳುವಿಕೆ ಸ್ಪರ್ಧೆ, ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಚಿತ್ರಕಲೆ ಮತ್ತು ಲಿಂಬು -ಚಮಚ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಓಟ – ಬಕೆಟ್ ಮತ್ತು ಬಾಲ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡು ವೀರಾಗ್ರಣಿಯಾಗಿ ಗುರುತಿಸಿಕೊಂಡಿದ್ದಾನೆ. ಈ ಸಾಧನೆಗೆ ಶಿರವಾಡ ಕೆಪಿಎಸ್ (KPS) ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿರುವ ಶಾಸಕ ಸತೀಶ ಸೈಲ್‌, ಉಪಾಧ್ಯಕ್ಷ ಸಂದೀಪ ನಾಯ್ಕ, ಸದಸ್ಯರಾದ ರವಿ ಗೌಡ, ಆನಂದ ಹುಲಸ್ವಾರ, ಶ್ವೇತಾ ಕಾಣಕೋಣಕರ, ಶಾಲೆಯ ಮುಖ್ಯಾಧ್ಯಾಪಕ ಪ್ರಭಾಕರ ಚಿಕ್ಕನ್ಮನೆ, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : training/ ರಾಷ್ಟ್ರಮಟ್ಟದ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು