ಕಾರವಾರ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ ೧ ರಿಂದ ೨೨ ರ ವರೆಗೆ ನಡೆಯಲಿದೆ. ಈ ಬಾರಿ ಜಿಲ್ಲೆಯಲ್ಲಿ ಒಟ್ಟು ೧೪,೪೦೧ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ೩೧ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಇದನ್ನೂ ಓದಿ : ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪ್ರಯಾಣ

ಅವರು ಇಂದು(ಫೆ.೨೭) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ರೆಗ್ಯೂಲರ್ , ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 14,401 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಭಾರತೀಯ ಸಂಸ್ಕೃತಿಯ ಆಚರಣೆಯಲ್ಲಿ ವಿಶಿಷ್ಟ ಅರ್ಥ: ಜಡೆ ಸ್ವಾಮೀಜಿ
ಪರೀಕ್ಷಾ ಕೇಂದ್ರಕ್ಕೆ ಇಲೆಕ್ಟ್ರಾನಿಕ್ ವಸ್ತು ತರದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನವೇ ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಸುಬ್ರಹ್ಮಣ್ಯ : ನಾಗರನಿಂದ ಮಗುವನ್ನು ರಕ್ಷಿಸಿದ ನಾಯಿ
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸಮಸ್ಯೆಗಳಾಗದಂತೆ ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ : ೭ನೇ ವೇತನ ಆಯೋಗ ವರದಿ ಬಂದ ನಂತರ ತೀರ್ಮಾನ- ಸಿದ್ದರಾಮಯ್ಯ
ಗೌಪ್ಯತೆಯ ದೃಷ್ಠಿಯಿಂದ ಪರೀಕ್ಷಾ ದಿನದಂದು ಮಾಧ್ಯಮದವರಿಗೆ ಪರೀಕ್ಷಾ ಕೊಠಡಿಯೊಳಗೆ ಚಿತ್ರೀಕರಣಕ್ಕೆ ಅವಕಾಶವಿರುವುದಿಲ್ಲ. ಆದರೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾಥಿಗಳು ಆಗಮಿಸುವ ಮತ್ತು ಪರೀಕ್ಷಾ ಕೇಂದ್ರದಿಂದ ತೆರಳುವುದನ್ನು ಚಿತ್ರೀಕರಿಸಲು ಅವಕಾಶವಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಜೇನು ಕೃಷಿ ತರಬೇತಿ, ನರೇಗಾ ಮಾಹಿತಿ ವಿನಿಮಯ ಕಾರ್ಯಗಾರ
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪ್ರಥಮ ಚಿಕಿತ್ಸಾ ಕಿಟ್ ನೊಂದಿಗೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.

ಇದನ್ನೂ ಓದಿ : ದಶಮಾನೋತ್ಸವ ಸಂಭ್ರಮದಲ್ಲಿ ಶ್ರೀಗುರು ಕಲಾ ಸಂಘ
ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡುವಂತೆ ಹಾಗೂ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುವುಂತೆ ಅಗತ್ಯವಿರುವ ವಾಹನಗಳ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ, ಗೊಂದಲಗಳಿಲ್ಲದೇ ಸುಗಮ ಮತ್ತು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ :ಭಾರತೀಯ ಸಂಸ್ಕೃತಿಯ ಆಚರಣೆಯಲ್ಲಿ ವಿಶಿಷ್ಟ ಅರ್ಥ: ಜಡೆ ಸ್ವಾಮೀಜಿ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್, ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಡಿಯೋ ನೋಡಿ : ಸರ್ಕಾರಿ ಶಾಲೆಯಲ್ಲಿ ಇಕೋ ಪಾರ್ಕ್   https://fb.watch/qtLyPbhShU/?mibextid=Nif5oz