ಭಟ್ಕಳ (Bhatkal): ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ವ್ಯಕ್ತಿಯೋರ್ವ ಹೃದಯಾಘಾತದಿಂದ (Heart Attack) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಭಟ್ಕಳದ ಹಾಶಿಮ್ ಬೇಕರಿ ಸಮೀಪ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ (cctv) ಸೆರೆಯಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮೃತ ವ್ಯಕ್ತಿಯನ್ನು ಫಜ್ಲೂರ್ ರೆಹಮಾನ್ ಶೇಖರ  (೫೪) ಎಂದು ಗುರುತಿಸಲಾಗಿದೆ. ಇವರು ಅಲ್ಲೇ ಸಮೀಪವಿದ್ದ ಹೋಟಲ್ ನಿಂದ ಹೊರ ಬಂದು ತಾವು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ಹಠಾತ್ ಸ್ಕೂಟರ ಸಮೇತ ಅಲ್ಲೇ ಕುಸಿದು ಬಿದ್ದಿದ್ದಾರೆ (Heart Attack). ಬಳಿಕ ಅಲ್ಲಿದ್ದ ಸಾರ್ವಜನಿಕರು ಅವರನ್ನು ತಕ್ಷಣ ವೆಲ್ ಫೇರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಬರುವ ಮುನ್ನವೇ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಿಸಿಟಿವಿ ದೃಶ್ಯವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ : dangerous driving/ ಭಟ್ಕಳದ ಏಳು ಜನರ ವಿರುದ್ಧ ಪ್ರಕರಣ ದಾಖಲು