ಅಂಕೋಲಾ (Ankola): ತಾಲೂಕಿನ ಉಳುವರೆ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾಗ ಸಿಡಿಲು ಬಡಿದು (lightning strike) ೬೫ ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೃತರನ್ನು ತಮ್ಮಾಣಿ ಅನಂತ ಗೌಡ ಎಂದು ಗುರುತಿಸಲಾಗಿದೆ. ಮನೆಯ ಮೇಲ್ಛಾವಣಿಯ ಮೇಲೆ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಡಿಲು ಬಡಿದು (lightning strike) ತೀವ್ರವಾಗಿ ಗಾಯಗೊಂಡ ಅವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದರು. ಕಂದಾಯ (revenue) ಮತ್ತು ಪೊಲೀಸ್ (police) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered). ಶಿರೂರು ಬೆಟ್ಟದ ಭೂಕುಸಿತದ (shiruru landslide) ಸಂದರ್ಭದಲ್ಲಿ ತಮ್ಮಣಿ ಗೌಡ ಅವರು ಸಾವಿನ ಅಂಚಿನಲ್ಲಿದ್ದರು. ಆಗ ಗಂಗಾವಳಿ ನದಿ ಉಕ್ಕಿ ಹರಿಯುತ್ತಿತ್ತು.
ಇದನ್ನೂ ಓದಿ : Sirsi/ ಶಿರಸಿಯಲ್ಲಿ ಅಪಘಾತ; ಮುರ್ಡೇಶ್ವರದ ವ್ಯಕ್ತಿಯಿಂದ ದೂರು