ಭಟ್ಕಳ (Bhatkal): ವಿಶ್ವ ಪ್ರಸಿದ್ಧ ಮುರುಡೇಶ್ವರದ (murudeshwara) ಶಿವ ದೇವಸ್ಥಾನದದಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರು ವಸ್ತ್ರ ಸಂಹಿತೆ (dress code) ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ ದೇವಸ್ಥಾನದ ಹೊರ ಭಾಗದಲ್ಲಿ ಸೂಚನೆ ಅಳವಡಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಕ್ತರು ವಸ್ತ್ರ ಸಂಹಿತೆ (dress code) ಪಾಲಿಸುವಂತೆ ವಿನಂತಿಸಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಬ್ಯಾನರ್ ಹಾಕಲಾಗಿದೆ. ಪುರುಷರು-ಅಂಗಿ ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು-ಸೀರೆ, ಚೂಡಿದಾರ ಧರಿಸಿ ದೇವರ ದರ್ಶನ ಮಾಡಬಹುದೆಂದು ತಿಳಿಸಲಾಗಿದೆ.
ಇದನ್ನು ಓದಿ: Landslide threat/ ಗುಡ್ಡದ ಅಂಚಿನಲ್ಲಿರುವ ಎಂಟು ಕುಟುಂಬಗಳಿಗೆ ನೋಟಿಸ್ ಜಾರಿ
ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಿ ೨೦೨೨ರ ಡಿಸೆಂಬರ್ ನಲ್ಲಿ ಸನಾತನ ಹಿಂದೂ ಜನಜಾಗೃತಿ ಸಮಿತಿಯ ಸ್ಥಳೀಯ ಘಟಕ ಮತ್ತು ವಿವಿಧ ಹಿಂದೂ ಪರ ಸಂಘಟನೆ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು.
ಇದನ್ನು ಓದಿ: Table tennis/ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಂಪನ್ನ



