ಕಾರವಾರ : ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ : ಕೆರೆಬೇಟೆ ಸಿದ್ಧತೆಯಲ್ಲಿರುವಾಗಲೇ ಮೀನುಗಳ ಮಾರಣಹೋಮ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾರ್ಚ್ ೧ ರಂದು ಬೆಳಗ್ಗೆ ೧೦ ಗಂಟೆಗೆ ಹಳಿಯಾಳದ ತಾಲೂಕು ಕಚೇರಿಯಲ್ಲಿ ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ ೩ ಗಂಟೆಗೆ ಜೋಯಿಡಾ ತಾಲೂಕು ಕಚೇರಿಯಲ್ಲಿ ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಬರ ನಿರ್ವಹಣೆ ಕುರಿತು ಸಭೆ ನಡೆಸಲಿದ್ದಾರೆ.

ಮಾರ್ಚ್ ೨ ರಂದು ಬೆಳಗ್ಗೆ ೧೦ ಗಂಟೆಗೆ ಮುಂಡಗೋಡ ತಾಲೂಕು ಕಚೇರಿಯಲ್ಲಿ ಮುಂಡಗೋಡ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಬರ ನಿರ್ವಹಣೆ ಕುರಿತು ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಡಿಯೋ ನೋಡಿ :ಅಂತಾರಾಷ್ಟ್ರೀಯ ಹಾಡಾಯ್ತು ಕರಿಮಣಿ ಮಾಲೀಕ ನಾನಲ್ಲ….  https://fb.watch/qwgckyVnMf/?mibextid=Nif5oz