ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಮಾರ್ಚ ೪ ಸೋಮವಾರದಂದು ನಡೆಯಲಿದೆ. ಈ ಕುರಿತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ನಾಯ್ಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ನಾಳೆಯಿಂದ
ಗುರುವಾರ ಬೆಳಿಗ್ಗೆ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಕರಿಕಲ್ ಧ್ಯಾನ ಕುಟೀರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ ಜರುಗಲಿದೆ. ಅಂದು ಲೋಕ ಕಲ್ಯಾಣಕ್ಕಾಗಿ ಶ್ರೀ ರಾಮ ತಾರಕ ಮಹಾಯಜ್ಞ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು. ಎಲ್ಲ ಭಕ್ತಾಭಿಮಾನಿಗಳು, ಬಂಧುಗಳು ಸಕುಂಟುಂಬಿಕರಾಗಿ ಕ್ಷೇತ್ರಕ್ಕೆ ಬಂದು ಶ್ರೀರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಿ ಪೂಜ್ಯ ಶ್ರೀಗಳಿಂದ ಮಂತ್ರಾಕ್ಷತೆ ಪಡೆದು ಪುನೀತರಾಗಬೇಕು ಎಂದು ಅವರು ವಿನಂತಿಸಿದರು.
ನಾಮಧಾರಿ ಗುರುಮಠದ ಗೌರವಾಧ್ಯಕ್ಷ ಕೃಷ್ಣ ನಾಯ್ಕ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಧ್ಯಾನ ಮಂದಿರದ ವರ್ಧಂತಿ ಉತ್ಸವ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಾಮಧಾರಿ ಗುರುಮಠದ ಆಡಳಿತ ಮಂಡಳಿಯ ಅಧ್ಯಕ್ಷ ಅರುಣ್‌ಕುಮಾರ್, ಉಪಾಧ್ಯಕ್ಷ ಎಂ.ಕೆ.ನಾಯ್ಕ, ಕಾರ್ಯದರ್ಶಿ ಡಿ.ಎಲ್.ನಾಯ್ಕ, ಸದಸ್ಯರಾದ ಕೆ.ಆರ್. ನಾಯ್ಕ, ಮಹೇಶ ನಾಯ್ಕ, ಶ್ರೀಧರ ನಾಯ್ಕ, ವಿಠ್ಠಲ್ ನಾಯ್ಕ, ವಿನಾಯಕ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಈ ವಿಡಿಯೋ ನೋಡಿ : ಅಂತಾರಾಷ್ಟ್ರೀಯ ಹಾಡಾಯ್ತು ಕರಿಮಣಿ ಮಾಲೀಕ ನಾನಲ್ಲ https://fb.watch/qwn47GUCCC/?mibextid=Nif5oz