ಹೊನ್ನಾವರ (Honnavar) : ಶರಾವತಿ ಸೇತುವೆ ಬಳಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ (accident) ಬೈಕ್ ಮೇಲೆ ಕುಳಿತಿದ್ದ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಹೊನ್ನಾವರ ಕಡೆಯಿಂದ ಕಾಸರಕೋಡ ಕಡೆಗೆ ಹೋಗುತ್ತಿದ್ದ ಬೈಕ್, ಬಸ್ ಓವರಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ (accident). ಮೃತ ಯುವತಿ ಹಳದೀಪುರ ಮೂಲದ ಪೂಜಾ ಗೌಡ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: BEd College/ ನಾಲ್ಕನೆಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ
ಗಾಯಗೊಂಡ ಬೈಕ ಸವಾರ ಸುರೇಶ ಗೌಡರನ್ನು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಬೈಕ್ ಹಾಗೂ ಕಾರಿನ ಮುಂಭಾಗ ಜಖಂ ಆಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಡಿಯೋ ಸಹಿತ ಇದನ್ನೂ ಓದಿ: ಶ್ರದ್ಧಾ ಭಕ್ತಿ ಸಂಭ್ರಮದ ಕೋಕ್ತಿ ಜಾತ್ರೆ ಸಂಪನ್ನ