ಭಟ್ಕಳ (Bhatkal) : ಬೈಪಾಸ್ ಬಳಿ ಖಾಸಗಿ ಬಸ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾದ (accident) ಘಟನೆ ಇಂದು ಮಂಗಳವಾರ ರಾತ್ರಿ ೧೦.೧೫ರ ಸುಮಾರಿಗೆ ನಡೆದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ (traffic jam) ಆಗಿತ್ತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳದಿಂದ ಕುಂದಾಪುರದ (kundapur) ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ (private bus) ಮತ್ತು ಎದುರಿನಿಂದ ಬರುತ್ತಿದ್ದ ಬೊಲೆರೋ (bolero) ವಾಹನ ಪರಸ್ಪರ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಬೊಲೆರೋ ವಾಹನ ಮುಂಭಾಗ ನಜ್ಜುಗುಜ್ಜಾಗಿದೆ. ಬೊಲೆರೊದಲ್ಲಿ ಇದ್ದವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸುರಿಮಳೆ
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯ (national highway) ಎರಡು ಕಡೆ ಕಿಲೋಮಿಟರ್ ನಷ್ಟು ದೂರದವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ (traffic jam) ಆಗಿತ್ತು. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾರ್ವಜನಿಕರ ಸಹಾಯದಿಂದ ಪೊಲೀಸರು ರಸ್ತೆ ಸಂಚಾರವನ್ನು ಸುಗಮಗೊಳಿಸಿದರು. ಅಪಘಾತದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ರೀಲ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ಗ್ರಾಪಂ ಮಟ್ಟದಲ್ಲೂ ವಸತಿಗೃಹ ನಿರ್ಮಾಣ