ಭಟ್ಕಳ: ಇಲ್ಲಿನ ಹನುಮಾನ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣವನ್ನು (school ground) ಕೆಲವು ಸ್ಥಳೀಯ ಯುವಕರು ಅನಧಿಕೃತವಾಗಿ ಕ್ರಿಕೆಟ್ ಮೈದಾನವನ್ನಾಗಿ ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವೆಂಕಟೇಶ್ವರ ಅಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀಧರ ನಾಯ್ಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮನವಿಯಲ್ಲಿ, ಶಾಲಾ ಮೈದಾನವನ್ನು (school ground) ಅಕ್ಕಪಕ್ಕದ ಗ್ರಾಮಗಳ ಯುವಕರಿಗೆ ಹಣ ಪಡೆದು ಕ್ರಿಕೆಟ್ ಆಡಲು ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಆಸರಕೇರಿ ಗ್ರಾಮದ ಯುವಕರು ಮೈದಾನ ಬಳಕೆಗೆ ಅನುಮತಿ ಕೇಳಿದಾಗ ಹೆಚ್ಚಿನ ಹಣದ ಬೇಡಿಕೆ ಇಟ್ಟು, ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಜಗಳ ಹಾಗೂ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ.
foundation/ ಮಹತ್ವಾಕಾಂಕ್ಷಿ ಕನಸಿಗೆ ಭದ್ರ ಅಡಿಪಾಯ
ಶಾಲಾ ಮೈದಾನದಲ್ಲಿ ಶಾಶ್ವತ ಕ್ರಿಕೆಟ್ ಅಂಕಣ ನಿರ್ಮಿಸಿರುವುದಲ್ಲದೆ, ಮದ್ಯಪಾನ ಹಾಗೂ ಗಾಂಜಾ ಸೇವನೆಯಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ಆರೋಪವೂ ಕೇಳಿಬಂದಿದೆ. ಶಾಲಾ ಮಕ್ಕಳ ಸುರಕ್ಷತೆ ಹಾಗೂ ಶಾಲಾ ಪರಿಸರದ ಹಿತದೃಷ್ಟಿಯಿಂದ ಮೈದಾನವನ್ನು ಪರಿಶೀಲಿಸಿ, ಶಾಲಾ ಚಟುವಟಿಕೆಗಳಿಗೆ ಮಾತ್ರ ಸೀಮಿತಗೊಳಿಸಬೇಕು. ಶಾಶ್ವತ ಕ್ರಿಕೆಟ್ ಅಂಕಣ ತೆರವುಗೊಳಿಸಿ, ಅಗತ್ಯವಿದ್ದರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಶಾಲೆಯ ಸುರಕ್ಷತೆ ಕಾಪಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ಶ್ರೀಧರ ನಾಯ್ಕ ಎಚ್ಚರಿಸಿದ್ದಾರೆ.



