ಭಟ್ಕಳ: ೩೦ ವರ್ಷಗಳಿಂದ ನ್ಯಾಯಾಲಯದ ವಾರೆಂಟ್‌ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿತನನ್ನು ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ (Accused arrested).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರಗಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ೧೯೯೬ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿತ ಮಹ್ಮದ್ ಜಾವೇದ (೫೫), ತಂದೆ ಅಬ್ದುಲ್ ಹಮೀದ್ ಖಾಜೀಯಾ, ಮೂಲತಃ ಭಟ್ಕಳದ (Bhatkal) ಸುಲ್ತಾನ್ ಸ್ಟ್ರೀಟ್ ನಿವಾಸಿಯಾಗಿದ್ದು, ಪ್ರಸ್ತುತ ಮಹಾರಾಷ್ಟ್ರದ (Maharashtra) ಥಾಣೆ (Thane) ನಗರದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದನು. ಪ್ರಕರಣ ದಾಖಲಾಗಿದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ಈತ ಮೂರು ದಶಕಗಳ ಕಾಲ ತಲೆಮರೆಸಿಕೊಂಡಿದ್ದನು.

ಇದನ್ನು ಓದಿ: Bangaramakki/ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಏಳು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮ

ಆರೋಪಿತನ ಪತ್ತೆಗೆ ಭಟ್ಕಳ ಶಹರ ಪೊಲೀಸರಿಂದ ವಿಶೇಷ ನುರಿತ ತಂಡ ರಚಿಸಲಾಗಿತ್ತು. ಖಚಿತ ಹಾಗೂ ತಾಂತ್ರಿಕ ಮಾಹಿತಿಯ ಆಧಾರದಲ್ಲಿ ತಂಡವು ಮುಂಬೈಗೆ ತೆರಳಿ ಆರೋಪಿತನನ್ನು ವಶಕ್ಕೆ ಪಡೆದು, ಭಟ್ಕಳಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿತು (Accused arrested). ವಿಚಾರಣೆ ಬಳಿಕ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನು ಓದಿ: old feud/ ಹಳೆಯ ದ್ವೇಷದ ಗಲಾಟೆಗೆ ಕಾರಣ ಬೇಕಿತ್ತು! 

ಈ ಕಾರ್ಯಾಚರಣೆ ಜಿಲ್ಲಾ ವರಿಷ್ಠಾಧಿಕಾರಿ ದೀಪನ ಎಂ.ಎನ್. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿಗಳಾದ ಎಂ. ಕೃಷ್ಣಮೂರ್ತಿ ಹಾಗೂ ಜಗದೀಶ ಎಂ., ಡಿವೈಎಸ್ಪಿ ಮಹೇಶ್ ಎಂ., ಸಿಪಿಐ ದಿವಾಕರ ಪಿ.ಎಂ., ಪಿಎಸ್ಐ ನವೀನ್ ಎಸ್. ನಾಯ್ಕ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಾಚರಣೆಯಲ್ಲಿ ಎಎಸ್‌ಐ ಅಂತೋನ್ ಫರ್ನಾಂಡಿಸ್, ಗಿರೀಶ ಅಂಕೋಲೆಕರ, ದೀಪಕ್ ಎಸ್. ನಾಯ್ಕ ಹಾಗೂ ಮಹಾಂತೇಶ ಹೀರೆಮಠ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನು ಓದಿ: arrested/ ಮುರುಡೇಶ್ವರದಲ್ಲಿ ವ್ಯಾಪಾರಿ ಬಂಧನ