ಭಟ್ಕಳ: ರಾಷ್ಟ್ರೀಯ ಹೆದ್ದಾರಿ(National Highway)-೬೬ರ ದೊಡ್ಡ ಬಲಸೆ ಕ್ರಾಸ್ ಬಳಿ ನಡೆದ ಚಿನ್ನದ ಸರ ಸುಲಿಗೆ (snatching gold chain) ಪ್ರಕರಣವನ್ನು ಮುರ್ಡೇಶ್ವರ ಪೊಲೀಸರು (Murdeshwar Police) ಕೇವಲ ೨೪ ಗಂಟೆಯಲ್ಲಿ ಭೇದಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಲಿಗೆ ಮಾಡಿದ್ದ ಸುಮಾರು ೨೨ ಗ್ರಾಂ ತೂಕದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಬೈಕ್ (bike) ಹಾಗೂ ಮೊಬೈಲ್ ಫೋನ್ (mobile phone) ಸೇರಿ ಒಟ್ಟು ₹೩ ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ (Bhatkal) ತಾಲೂಕಿನ ಬೈಲೂರು ದೊಡ್ಡ ಬಲಸೆ ನಿವಾಸಿ ಮಾದೇವ ನಾರಾಯಣ ನಾಯ್ಕ (೫೬) ಅವರು ಜುಲೈ ೨೦ರಂದು ರಾತ್ರಿ ತಮ್ಮ ಕಿರಾಣಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ, ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು (snatching gold chain). ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Illegal cattle transport/ ಜಾನುವಾರು ಅಕ್ರಮ ಸಾಗಣೆ: ಭಟ್ಕಳದಲ್ಲಿ ನಾಲ್ವರ ಬಂಧನ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಕನ್ನಡ (Uttara Kannada) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಡಿವೈಎಸ್ಪಿ ಗಿರೀಶ ಬಿ ಮಾರ್ಗದರ್ಶನದಲ್ಲಿ, ಮುರ್ಡೇಶ್ವರ ವೃತ್ತದ ಸಿಪಿಐ ಜಗದೀಶ ಹಂಚಿನಾಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
World Devadiga Convention/ ವಿಶ್ವ ದೇವಡಿಗ ಸಮಾವೇಶ: ಭಟ್ಕಳದಲ್ಲಿ ಪೂರ್ವಭಾವಿ ಸಭೆ
ಪಿಎಸ್ಐ ಹಣಮಂತ ಬಿರಾದಾರ ಹಾಗೂ ಸಿಬ್ಬಂದಿ ಸುಬ್ರಹ್ಮಣ್ಯ ನಾಯ್ಕ, ಅರುಣ ಪಿಂಟೋ, ಮಂಜುನಾಥ ಲಕ್ಕಾಪುರ, ಬಿಲಾಲ್ ಅಹ್ಮದ್ ಸಿದ್ದಾಪೂರ, ವಿಜಯ ನಾಯ್ಕ, ಮಹೇಶ ಸಮನಳ್ಳಿ, ಸಿದ್ದಪ್ಪ ಕಾಂಬಳೆ ಮತ್ತು ಸದಾಶಿವ ಕಟ್ಟಿಮನಿ ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯ ಸುಳಿವಿನ ಆಧಾರದಲ್ಲಿ ತನಿಖೆ ನಡೆಸಿ, ಹಲ್ಲಂದಿ-ಕಟಗಾರಕೊಪ್ಪ ನಿವಾಸಿ ನಾಗರಾಜ ಗಣಪತಿ ಗೊಂಡ (೨೯)ನನ್ನು ಬಂಧಿಸಿದರು. ಆರೋಪಿಯಿಂದ ಸುಲಿಗೆ ಮಾಡಿದ್ದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
Karate Competition/ ತುಷಾರ ಮಹಾಲೆ ಸಹಿತ ೧೬ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ


