ಕುಂದಾಪುರ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಚಲನಚಿತ್ರ ನಟ ದರ್ಶನ್ ಅವರ ಧರ್ಮಪತ್ನಿ(Actor Darshan wife) ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ನಟ ದರ್ಶನ್ ಪತ್ನಿ(Actor Darshan wife)
ವಿಜಯಲಕ್ಷ್ಮಿ ಹಾಗೂ ಇತರರು ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಕೊಲ್ಲೂರಿಗೆ ಗುರುವಾರ ರಾತ್ರಿ ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ. ದರ್ಶನ್ ಬಿಡುಗಡೆ ಸಂಬಂಧ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದೆ. ಯಾಗ ಶಾಲೆಯಲ್ಲಿ ಚಂಡಿಕಾ ಹೋಮ ನಡೆಯಲಿದ್ದು ದರ್ಶನ್ ಬಿಡುಗಡೆಗೆ ವಿಜಯಲಕ್ಷ್ಮೀ ಅವರು ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಇದನ್ನೂ ಓದಿ : ಹೆಬ್ಬಾಳ ಸೇತುವೆ ಮುಳುಗಡೆ; ಹೊರನಾಡು ಸಂಪರ್ಕ ಕಡಿತ