ಭಟ್ಕಳ: ಇತ್ತೀಚಿನ ದಿನಗಳಲ್ಲಿ ಭಟ್ಕಳದಲ್ಲಿ (Bhatkal) ನಡೆದ ಕೆಲ ಘಟನೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿಗತಿಗಳ ಪರಿಶೀಲನೆಗಾಗಿ ರಾಜ್ಯ ಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ (ADGP)ಆರ್ ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ (IGP) ಅಮಿತ್ ಸಿಂಗ್ ಭಟ್ಕಳಕ್ಕೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳ (Police Stations) ಕಾರ್ಯವೈಖರಿಯನ್ನು ಪರಿಶೀಲಿಸಿದ ಬಳಿಕ ನಡೆದ ಸಭೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗುವ ಯಾವುದೇ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇತ್ತೀಚೆಗೆ ನಡೆದ ವಿವಿಧ ಪ್ರಕರಣಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡ ಹಿರಿಯ ಅಧಿಕಾರಿಗಳು, ಮುನ್ನೆಚ್ಚರಿಕಾ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

exiled/ ಮೂಸಾನಗರ ನಿವಾಸಿಗೆ ಜಿಲ್ಲೆಯಿಂದ ಆರು ತಿಂಗಳು ಗಡಿಪಾರು 

ಯಾವುದೇ ಸಂಘಟನೆ, ವ್ಯಕ್ತಿ ಅಥವಾ ಗುಂಪು ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು. ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಪ್ರಯತ್ನಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಪಕ್ಷಪಾತವಿಲ್ಲದೆ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಮಾಹಿತಿ, ವದಂತಿಗಳು ಹಾಗೂ ಪ್ರಚೋದನಾತ್ಮಕ ಸಂದೇಶಗಳ ಮೇಲೆ ನಿಗಾ ವಹಿಸಬೇಕು. ಶಾಂತಿ ಕದಡುವ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಣೆ ಹೆಚ್ಚಿಸಬೇಕು. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಬೀಟ್ ವ್ಯವಸ್ಥೆಯನ್ನು ಬಲಪಡಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ನಿಗಾ ಮುಂದುವರಿಸಬೇಕು ಎಂದು ಸಲಹೆ ನೀಡಿದರು.

Kannada language/ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಗೆ ಶೇ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ 

ಸಭೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಎಂ ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಭಟ್ಕಳ (Bhatkal) ಡಿವೈಎಸ್ಪಿ (DySP) ಗಿರೀಶ್ ಬಿ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಹಿರಿಯ ಅಧಿಕಾರಿಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡಿದರು.

humanitarian/ ಚಿಪ್ಪಿಕಲ್ಲು ದುರಂತದ ಸಂತ್ರಸ್ತ ಮಕ್ಕಳಿಗೆ ಕಸಾಪ ನೆರವು