ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಪಕ್ಷದ ಹಿರಿಯ ಮುಖಂಡ ಹೊನ್ನಾವರದ ಜಗದೀಪ ಎನ್. ತೆಂಗೇರಿಯವರನ್ನು ನೇಮಕ (Appointment) ಮಾಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ್ ಗಾಂವಕರ್ ಅವರು ನೇಮಕ (Appointment) ಆದೇಶ ಹೊರಡಿಸಿದ್ದಾರೆ. ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದೊಂದಿಗೆ ಪಕ್ಷ ಸಂಘಟಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ : ಉತ್ತರ ಕನ್ನಡದಲ್ಲಿವೆ ೩೨ ಪುರಾತನ ಸ್ಮಾರಕಗಳು
ಅಕ್ಟೋಬರ್ ತಿಂಗಳಿನಲ್ಲಿಯೇ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಜಗದೀಪ ತೆಂಗೇರಿ ಅವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆದೇಶ ಹೊರಡಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ನಿಯಮಾವಳಿಯ ಪ್ರಕಾರ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನದ ಅನ್ವಯ ಮತ್ತು ಅಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಂತಹ ಗುರುತರ ಜವಾಬ್ದಾರಿಯಲ್ಲಿರುವಾಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆ ಸ್ವೀಕರಿಸಿರಲಿಲ್ಲ. ಕಳೆದ ಮೇ ತಿಂಗಳ ಅಂತ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಕೆನರಾ ಲೋಕಸಭಾ ಚುನಾವಣೆಯಲ್ಲಾದ ಸೋಲಿನ ಪರಾಮರ್ಶೆ ಕುರಿತಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ನೇತ್ರತ್ವದ ಸತ್ಯಶೋಧನಾ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಾಲ್ಗೊಳ್ಳುವ ಮೂಲಕ ಪಕ್ಷದ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ ಎಂದು ಜಗದೀಪ್ ಎನ್.ತೆಂಗೇರಿ ತಿಳಿಸಿದ್ದಾರೆ.
ಇದನ್ನೂ ಓದಿ : ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಘೋಷಣೆ
೧೯೮೩ರಲ್ಲಿ ಹೊನ್ನಾವರ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ತೆಂಗೇರಿಯವರು ೧೯೯೧ರಿಂದ ೧೯೯೯ರವರೆಗೆ ಹೊನ್ನಾವರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಂತರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ೨೦೦೦ರಿಂದ೨೦೧೦ ರವರೆಗೆ ಹೊನ್ನಾವರ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ೨೦೧೦ ರಿಂದ ೨೦೧೭ರವರೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ೨೦೧೭ರಿಂದ ೨೦೨೪ರವರೆಗೆ ಪುನಃ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಪಕ್ಷದಲ್ಲಿ ೪೦ ವರ್ಷಕ್ಕೂ ಸುದೀರ್ಘ ಸಮಯ ಸೇವೆ ಸಲ್ಲಿಸಿರುವ ತೆಂಗೇರಿಯವರು ಈಗ ಪುನಃ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.