ಭಟ್ಕಳ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಅಹಿಂದ ಸಂಘಟನೆಗಳನ್ನು ಬಲಪಡಿಸಿ ಜನರಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸಲಾಗುವುದು (Ahinda unity). ಭಟ್ಕಳದಲ್ಲಿ (Bhatkal) ಎಲ್ಲಾ ಪ್ರಮುಖರು ಅಹಿಂದ ಸಂಘಟನೆ ಬಲಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ ನಾಗೇಶ ನಾಯ್ಕ ಕಾಗಾಲ ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಹಿಂದ ಸಂಘಟನೆಯನ್ನು ಸಂಘಟಿತವಾಗಿ ಬಲಪಡಿಸುವ ಉದ್ದೇಶದಿಂದ ಎಲ್ಲ ತಾಲೂಕುಗಳಲ್ಲಿ ಸಭೆಗಳನ್ನು ನಡೆಸಿ ಚರ್ಚಿಸಲಾಗುತ್ತಿದೆ. ಯುವಜನರನ್ನು ರಾಜಕೀಯವಾಗಿ ಸಶಕ್ತರನ್ನಾಗಿಸುವ ಜೊತೆಗೆ ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಲಾಗುವುದು. ಸಾಮಾಜಿಕ ಚಳವಳಿಗಳ ಬಲವರ್ಧನೆಯ ಮೂಲಕ ರಾಜಕೀಯ ಸಬಲೀಕರಣ ಸಾಧಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಚಲನ ಸಮಿತಿಗಳನ್ನು ರಚಿಸಲಾಗುವುದು (Ahinda unity). ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಆಧಾರವಾಗಿಸಿಕೊಂಡು ಹೋರಾಟದ ತಳಹದಿ ರೂಪಿಸಲಾಗುವುದು ಎಂದರು.
ಇದನ್ನು ಓದಿ: Fisherman death/ ಸಮುದ್ರದಲ್ಲಿ ಮುಳುಗಿ ಮೀನುಗಾರ ಸಾವು
ಹಿರಿಯ ಮುಖಂಡ ರಾಮಾ ಎಂ. ಮೊಗೇರ ಮಾತನಾಡಿ, ಜಿಲ್ಲೆಯಲ್ಲಿ ಅಹಿಂದ ಸಂಘಟನೆಯ ಅಗತ್ಯವಿದ್ದು, ಅಹಿಂದ ವರ್ಗದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಬೇಕಾಗಿದೆ ಎಂದರು. ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಅಹಿಂದ ಸಂಘಟನೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲು ಸಂಘಟಿತರಾಗುವುದು ಅತ್ಯವಶ್ಯಕ ಎಂದು ಹೇಳಿದರು.
ಇದನ್ನು ಓದಿ: Cooperative Cup/ ಸಹಕಾರಿ ಕಪ್ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ – ಜಿ.ವಿ.ಎಸ್.ಎಸ್. ಕೈಕಿಣಿ ಚಾಂಪಿಯನ್
ಕಾರ್ಯಕ್ರಮದಲ್ಲಿ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಹಾಗೂ ಮಾರುಕೇರಿ ಗ್ರಾ ಪಂ ಉಪಾಧ್ಯಕ್ಷ ಎಂ.ಡಿ. ನಾಯ್ಕ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಸತೀಶಕುಮಾರ ನಾಯ್ಕ, ಸಾಲಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಣಪತಿ ನಾಯ್ಕ, ವೆಂಕಟಯ್ಯ ಬೈರುಮನೆ, ಕುಮಟಾದ ಸುಧಾಕರ, ಶಿವಾನಂದ ನಾಯ್ಕ (ಶಿರಸಿ), ಕೆ. ಸುಲೇಮಾನ್, ಶ್ರೀಧರ ನಾಯ್ಕ, ಟಿ ಡಿ ನಾಯ್ಕ, ದಿನೇಶ ಗೊಂಡ, ವೆಂಕಟೇಶ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿ: national level/ ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ ಪಡೆದ ವಿದ್ಯಾಂಜಲಿ ಶಾಲೆಯ ವಿದ್ಯಾರ್ಥಿ



