ಭಟ್ಕಳ(Bhatkal): ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಮತ್ತು ಸಹಾಯಕ ಆಯುಕ್ತ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ನಿಯಮಾವಳಿಗಳನ್ನು ಗಾಳಿಗೆ ತೂರಿ ಒಂದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾಯಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ (RTI Activist) ವೇದಿಕೆ ವತಿಯಿಂದ ಅಹೋರಾತ್ರಿ ಧರಣಿ (Ahorathri Dharani) ಹಮ್ಮಿಕೊಳ್ಳಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸೆ. ೨೦ರಂದು ಬೆಳಿಗ್ಗೆ ೧೧ ಗಂಟೆಯಿಂದ ತಾಲೂಕಾ ಆಡಳಿತ ಸೌಧದ ಧ್ವಜದ ಕಟ್ಟೆಯ ಎದುರು ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ (Ahorathri Dharani) ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ವೇದಿಕೆ ತಿಳಿಸಿದೆ. ಈ ಕುರಿತು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿ ಮತ್ತು ಸಹಾಯಕ ಆಯುಕ್ತ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ನಿಯಮಾವಳಿಗಳನ್ನು ಗಾಳಿಗೆ ತೂರಿ ಒಂದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾಯಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ : ಬೋಟ್‌ ಪಲ್ಟಿಯಾಗಿ ಮೀನುಗಾರ ಸಾವು

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿ ಮತ್ತು ಸಹಾಯಕ ಆಯುಕ್ತ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ನಿಯಮಾವಳಿಗಳನ್ನು ಗಾಳಿಗೆ ತೂರಿ ಒಂದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ತಕ್ಷಣ ಇಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೇರೆ ತಾಲೂಕಿಗೆ ಅಥವಾ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿ ನಿಯಮಾವಳಿಗಳನ್ನು ಪಾಲಿಸಿ, ಸಾಮಾಜಿಕ ನ್ಯಾಯ ಒದಗಿಸುವಂತೆ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ : ಸೆಪ್ಟೆಂಬರ್‌ ೧೨ರಂದು ವಿವಿಧೆಡೆ ಅಡಿಕೆ ಧಾರಣೆ

ಇಂತಹ ಸಿಬ್ಬಂದಿ ಒಂದೇ ಸ್ಥಳದಲ್ಲಿ ಕೆಲಸ ಮಾಡುವುದರಿಂದ ಇಲಾಖೆಯ ಘನತೆ, ಗೌರವ ಹಾಳಾಗುತ್ತಿದೆ. ಇಂತಹ ಸಿಬ್ಬಂದಿಯಿಂದ ಸಾರ್ವಜನಿಕರ ಕೆಲಸವೂ ಆಗುವುದಿಲ್ಲ. ಇಲ್ಲಿರುವ ಸಿಬ್ಬಂದಿ, ಸಾರ್ವಜನಿಕರ ಕೆಲಸ ಮಾಡುವುದಕ್ಕಿಂತ ದಲ್ಲಾಳಿಗಳ ಕೆಲಸಕ್ಕೆ ಸೀಮಿತವಾದಂತಿದೆ. ಇಲ್ಲಿರುವ ಸಿಬ್ಬಂದಿ ವರ್ಗಾವಣೆಯು ಸಹಾಯಕ ಆಯುಕ್ತರ ಕಚೇರಿಯಿಂದ ತಹಶೀಲ್ದಾರ ಕಚೇರಿಗೆ, ತಹಶೀಲ್ದಾರ ಕಚೇರಿಯಿಂದ ಸಹಾಯಕ ಆಯುಕ್ತರ ಕಚೇರಿಗೆ ಮಾತ್ರ ಸೀಮಿತವಾಗಿದೆ. ಇವರ ನೌಕರಿಯು ಕೇವಲ ಭಟ್ಕಳ ತಾಲೂಕಿಗೆ ಮಾತ್ರ ಸೀಮಿತವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ :  ಸಂಸ್ಕೃತ ವಿವಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಸನ್ಮಾನ

ಈ ಹಿಂದೆ ಸಹಾಯಕ ಆಯುಕ್ತ ಕಚೇರಿಯ ಮೂಲಕ ಜಿಲ್ಲಾಧಿಕಾರಿ, ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು.  ಆದ್ರೂ ಸಾರ್ವಜನಿಕರ ಪರವಾಗಿ ಕ್ರಮ ಕೈಗೊಳ್ಳದೇ ಇಲಾಖೆಯ ಅಧಿಕಾರಿಗಳ ಪರವಾಗಿಯೇ ವರ್ತಿಸುತ್ತಿರುವ ಜಿಲ್ಲಾಡಳಿತದ ಧೋರಣೆಯನ್ನು ವಿರೋಧಿಸಿ ಧರಣಿ ಆಯೋಜಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಅಪರ ಜಿಲ್ಹಾಧಿಕಾರಿ ಪ್ರಕಾಶ. ಜಿ. ರಜಪೂತ ಅವರಿಗೆ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಈ ವೇಳೆ ವೇದಿಕೆ ಜಿಲ್ಲಾಧ್ಯಕ್ಷ ಶಂಕರ ನಾಯ್ಕ, ಭಟ್ಕಳ ತಾಲೂಕು ಅಧ್ಯಕ್ಷ ನಾಗೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಉಪಸ್ಥಿತರಿದ್ದರು.