ಭಟ್ಕಳ : ಭಟ್ಕಳದಿಂದ ಕೇವಲ ೨೦ ಕಿ.ಮೀ. ದೂರದಲ್ಲಿ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ(Airport request) ಸಲ್ಲಿಸಲಾಗಿದೆ. ಈ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿದುಬಂದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಈ ಕುರಿತು ಮನವಿ (Airport request) ಸಲ್ಲಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಸಲ್ಲಿಸಲಾಗಿದೆ.
ವಿಡಿಯೋ ಸಹಿತ ಇದನ್ನೂ ಓದಿ : ಗದ್ದುಗೆ ಏರಿ ಭಕ್ತರನ್ನು ಹರಸುತ್ತಿರುವ ಮಾರಿಯಮ್ಮ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ ೧೦ ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ : ಜುಲೈ ೩೧ರಂದು ವಿವಿಧೆಡೆ ಅಡಿಕೆ ಧಾರಣೆ
ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು ೫೦೦ ಎಕರೆಗೂ ಅಧಿಕ ಸ್ಥಳ ಲಭ್ಯವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾದಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ. ಮನವಿಯ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.