ಭಟ್ಕಳ: ಬಡ್ತಿ ಮತ್ತು ವರ್ಗಾವಣೆಗಾಗಿ ಆಗ್ರಹಿಸಿ “ಬೆಂಗಳೂರು ಚಲೋ” ಮೂಲಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೊಸಿಯೇಶನ್ (ಐಟಾ) ಕರ್ನಾಟಕವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ (AITA supports).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ, ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ೧ರಿಂದ ೫ ನೇ ತರಗತಿ ವರೆಗೆ ಪಾಠ ಮಾಡುತ್ತಿರುವ ಶಿಕ್ಷಕರು ಪದವೀಧರರಾಗಿದ್ದಾರೆ. ಅವರನ್ನು ೬-೮ ನೇ ತರಗತಿಗೆ ಪಾಠ ಮಾಡುವ ”ಜಿಪಿಟಿ ಶಿಕ್ಷಕಕರು’ ಹುದ್ದೆಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ-೨೦೧೭ಕ್ಕೆ ತಿದ್ದುಪಡಿ ತರಬೇಕು. ಸೇವಾ ಜೇಷ್ಠತೆ, ಬಡ್ತಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಅನ್ಯಾಯ ಸೇರಿದಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಯನ್ನು ಐಟಾ ಬೆಂಬಲಿಸುತ್ತದೆ (AITA supports) ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿಯ ವಿಮಾನ ಮಧ್ಯಪ್ರದೇಶದಲ್ಲಿ ಪತನ