ಕಾರವಾರ: “ಭಟ್ಕಳ (Bhatkal) ತಾಲೂಕಿನ ಮುರಿನಕಟ್ಟೆ (Murinakatte)ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳವನ್ನು ಗುರುತಿಸಲಾಗಿದ್ದು, ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಟ್ಕಳ ತಾಲೂಕಿನ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ (National Highway)-೬೬ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ವಾಹನ ಸಂಚಾರ ಮತ್ತು ಜನರ ಓಡಾಟಕ್ಕೆ ತೊಂದರೆಯಾಗದಂತೆ ಅಮ್ಮನವರ ಹೊರೆಯನ್ನು ಇರಿಸಲು (Murinakatte) ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸುವ ಅಗತ್ಯವಿತ್ತು. ನಗರದ ವಿವಿಧ ಸಮುದಾಯಗಳ ಹಿರಿಯ ನಾಗರಿಕರೊಂದಿಗೆ ಚರ್ಚಿಸಿ, ಸರ್ವಾನುಮತದ ಅಭಿಪ್ರಾಯದ ಮೇರೆಗೆ ಪರ್ಯಾಯ ಸ್ಥಳವನ್ನು ಗುರುತಿಸಲಾಗಿದೆ. ಎಲ್ಲರ ಒಪ್ಪಿಗೆಯಂತೆ ಹಾಲಿ ಅಮ್ಮನವರ ಹೊರೆಯನ್ನು ಇರಿಸಲಾಗಿರುವ ಅದೇ ರಸ್ತೆಯ ಮಧ್ಯಭಾಗದಲ್ಲಿರುವ (ಮಿಡಿಯನ್) ಲಭ್ಯ ಸ್ಥಳವನ್ನು ಪರ್ಯಾಯ ಜಾಗವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Bhatkal bandh/ ಸ್ವಯಂಪ್ರೇರಿತ ಭಟ್ಕಳ ಬಂದ್ ಕರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಿಡಿಯನ್ ಹಾಗೂ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಮುಖಂಡರೊಂದಿಗೆ ಜಿಲ್ಲಾಡಳಿತ ಸಮಾಲೋಚನೆ ಪ್ರಾರಂಭಿಸಿದ್ದು, ಮುಂದಿನ ಹಂತದ ಕ್ರಮಗಳನ್ನು ಶೀಘ್ರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

missing/ ಮುರ್ಡೇಶ್ವರದಲ್ಲಿ ತಾಯಿ-ತಂದೆ ಜೊತೆ ಮಲಗಿದ್ದ ಮಗು ನಾಪತ್ತೆ