ಕಾರವಾರ: ತಾಲೂಕಿನಲ್ಲಿ ಖಾಲಿ ಇರುವ ೨ ಅಂಗನವಾಡಿ ಕಾರ್ಯಕರ್ತೆ(Anganawadi worker) ಹಾಗೂ ೬ ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ಸಹಾಯಕಿ ಗೌರವ ಸೇವೆಯ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ವೆಬ್‌ಸೈಟ್ https://dwcd.karnataka.gov.in ದಲ್ಲಿ ಆನ್‌ಲೈನ್ ಸೇವೆಗಳ ಟ್ಯಾಬ್‌ನಲ್ಲಿ ಕಾರ್ಯಕರ್ತೆ/ಸಹಾಯಕಿಯರ ಆನ್‌ಲೈನ್ ನೇಮಕಾತಿಯ ಸಬ್ ಟ್ಯಾಬ್‌ನಲ್ಲಿ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಬಾವಿಗೆ ಬಿದ್ದು ಮಗು ದುರ್ಮರಣ

ಆನ್‌ಲೈನ್ https://karnemakaone.kar.nic.in/abcd/ ಮೂಲಕ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುಲು ಆ.೧೨ ಕೊನೆಯ ದಿನವಾಗಿದೆ ಎಂದು ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.