ಅಂಕೋಲಾ (Ankola) : ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ಸಮೀಪದ ಕೇಣಿ ಗ್ರಾಮದ ನೂರಾರು ಮೀನುಗಾರರು (fishermen) ಕೇಣಿಯಲ್ಲಿ ವಾಣಿಜ್ಯ ಬಂದರು (commercial port) ಯೋಜನೆಗೆ ವಿರೋಧ ವ್ಯಕ್ತಪಡಿಸಲು ಅರಬ್ಬಿ ಸಮುದ್ರಕ್ಕೆ ಹಾರಿದ್ದಾರೆ (Women protest). ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ಮಹಿಳೆಯರಿದ್ದರು. ಈ ಪೈಕಿ ಮೂವರು ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ನಿಷೇಧಾಜ್ಞೆಯ ಹೊರತಾಗಿಯೂ, ಫೆಬ್ರವರಿ ೨೪ ರಂದು ಬೆಳಿಗ್ಗೆ ೮ ಗಂಟೆಗೆ ಸುಮಾರು ೧೦೦೦ ಕ್ಕೂ ಹೆಚ್ಚು ಪ್ರತಿಭಟನಾಕಾರರು ಬೀಚ್‌ನಲ್ಲಿ (beech) ಜಮಾಯಿಸಿದ್ದರು (women protest). ಆ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಇದನ್ನು ಓದಿ : DC Order/ ಈ ಗ್ರಾಮಗಳಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ?
ಅವರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಸ್ಪಂದಿಸದಿದ್ದಾಗ ನೂರಾರು ಮಹಿಳೆಯರು ಸಮುದ್ರಕ್ಕೆ ಹಾರಲು ಮುಂದಾದರು. ಮೂವರು ಮಹಿಳೆಯರು ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.
ಇದನ್ನು ಓದಿ : Bhajane/ ಸಪ್ತ ಪ್ರಹರ ಭಜನಾ ಕಾರ್ಯಕ್ರಮ