ಭಟ್ಕಳ (Bhatkal) : ತಾಲೂಕಿನ ಹಡೀನ ಗ್ರಾಮದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು (Annual Gathering) ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Mankal Vaidya) ಉದ್ಘಾಟಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮ (Annual Gathering) ಉದ್ಘಾಟಿಸಿ ಮಾತನಾಡಿದ ಸಚಿವ ಮಂಕಾಳ ವೈದ್ಯ, ಜೀವನದಲ್ಲಿ ಶಿಕ್ಷಣ ಅತಿ ಮುಖ್ಯವಾದದ್ದು. ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು. ಹಡೀನದಲ್ಲಿರುವ ಈ ಸರಕಾರಿ ಪದವಿ ಪೂರ್ವ ಕಾಲೇಜು ಆರಂಭದಲ್ಲಿ ಸಮಾಜ ಮಂದಿರದಲ್ಲಿ ನಡೆಯುತ್ತಿತ್ತು. ನಾನು ಪ್ರಥಮ ಬಾರಿಗೆ ಶಾಸಕನಾಗಿದ್ದಾಗ ಕಟ್ಟಡ ನಿರ್ಮಾಣ ಆಗಿದೆ. ಈಗಲೂ ಕೂಡ ಇಲ್ಲಿ ಕೊಠಡಿಯ ಕೊರತೆ ಇದೆ ಎಂಬುದು ಗಮನಕ್ಕೆ ಬಂದಿದೆ. ಆದಷ್ಟು ಶೀಘ್ರವಾಗಿ ಇಲ್ಲಿನ ಎಲ್ಲಾ ಕುಂದುಕೊರತೆಗಳನ್ನು ನೀಗಿಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಸಹಕರಿಸುತ್ತೇನೆ ಎಂದರು.
ವಿಡಿಯೋ ಸಹಿತ ಇದನ್ನೂ ಓದಿ : ಶೇಡಿ ಮರ ಏರಿದ ಸಹಸ್ರಾರು ಭಕ್ತರು
ಈ ಕಾಲೇಜಿನಲ್ಲಿ ೨೫೦ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಇರುವುದು ಸಂತಸ ತಂದಿದೆ. ನಾನು ನನ್ನ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟವನು. ಇಲ್ಲಿನ ಕಟ್ಟಡ ಕೊರತೆ, ಉಪನ್ಯಾಸಕರ ಕೊರತೆ, ಅತಿಥಿ ಉಪನ್ಯಾಸಕರ ಸಹಾಯಧನ ಹಾಗೂ ಇನ್ನುಳಿದಂತೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ಪರಿಹರಿಸುತ್ತೇನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ : ‘ಶಿರಾಲಿಯ ಶಕ್ತಿ – ಶ್ರೀ ಹಾದಿ ಮಾಸ್ತಿ’ ಪುಸ್ತಕ ಲೋಕಾರ್ಪಣೆ
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಸತೀಶ ನಾಯ್ಕ ಮಾತನಾಡಿ, ಕೊರತೆ ಇದೆ ಎಂದು ಮರುಗುತ್ತಾ ಕೂರದೆ ಕೊರತೆಯನ್ನೇ ಮೀರಿಸಿ ಈ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದನ್ನು ಗಮನಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ಕಾಲೇಜಿನ ಫಲಿತಾಂಶ ಕೂಡ ಉತ್ತಮವಾಗಿದೆ. ಇಲ್ಲಿನ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಚಾರ್ಯ ಹಾಗೂ ಉಪನ್ಯಾಸಕ ವೃಂದದ ಸತತ ಪರಿಶ್ರಮ ಕಾಲೇಜಿನ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇಲ್ಲಿನ ಕೆಲವು ಕೊರತೆಗಳನ್ನು ಸಚಿವರು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತಿ ಹೊಂದಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ : Readers letter/ ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ತಾತ್ಸಾರವೇಕೆ?
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಭಾಸ್ಕರ ನಾಯ್ಕ ಹಾಗೂ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಕೃಷ್ಣ ಗೊಂಡ ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾಲೇಜಿನಲ್ಲಿ ನಡೆದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವಿಡಿಯೋ ಸಹಿತ ಇದನ್ನೂ ಓದಿ : Under Pass/ ಗ್ರಾಮಸ್ಥರಿಂದ ಸಂಸದ ಕಾಗೇರಿ ತರಾಟೆಗೆ
ಕಾಲೇಜಿನ ಪ್ರಾಚಾರ್ಯ ಗಜಾನನ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಮಂಜುನಾಥ ನಾಯ್ಕ ಕಾರ್ಯಕ್ರಮ ನಿರ್ವಹಿಸಿ, ಯೋಗೇಶ ಪಟಗಾರ ವರದಿ ವಾಚಿಸಿದರು. ಹಿರಿಯ ಉಪನ್ಯಾಸಕ ಎಂ.ಕೆ.ನಾಯ್ಕ ವಂದಿಸಿದರು. ಉಪನ್ಯಾಸಕ ರಂಗ ಪಟಗಾರ ಹಾಗೂ ಉಳಿದ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ಸಹಕರಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ಮನೆಯ ಹಬ್ಬವಾಗಿಸುವ ಮಾರಿ ಜಾತ್ರೆ