ಭಟ್ಕಳ (Bhatkal) : ಭಟ್ಕಳದ ಶ್ರೀ ಗುರು ಸುಧೀಂದ್ರ (Shri Guru Sudhindra) ಪದವಿ ಮಹಾವಿದ್ಯಾಲಯದ ೨೦೨೪-೨೫ನೇ ಸಾಲಿನ ವಾರ್ಷಿಕ ಕ್ರೀಡಾಕೂಟ (Annual Sports) ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮ (Annual Sports) ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮನಮೋಹನ ನಾಯ್ಕ, ಮಕ್ಕಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವುದರಿಂದ ಅವರ ಶಾರೀರಿಕ, ಮಾನಸಿಕ ಹಾಗು ಸಾಮಾಜಿಕ ಬೆಳವಣಿಗೆಗೆ ಉತ್ತೇಜನ ದೊರೆಯುತ್ತದೆ. ಕ್ರೀಡೆಯು ಶೈಕ್ಷಣಿಕ ಜೀವನದ ಅವಿಭಾಜ್ಯ ಅಂಗವಾಗಿದೆ. ಇದರಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹಕಾರ ಮತ್ತು ನಾಯಕತ್ವದ ಗುಣಗಳು ಬೆಳೆಯುತ್ತವೆ” ಎಂದರು.
ಇದನ್ನೂ ಓದಿ : Save life / “ನೀರು ನೀಡಿ-ಜೀವ ಉಳಿಸಿ” ಅಭಿಯಾನ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀನಾಥ ಪೈ ಮಾತನಾಡಿ, ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಉಪನ್ಯಾಸಕ ಕೃಷ್ಣ ಮೊಗೇರ ಕ್ರೀಡಾಳುಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆನಂದ ದೇವಾಡಿಗ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ ನಾಯ್ಕ, ಬೋಧಕ-ಬೋಧಕೇತರ ಸಿಬ್ಬಂದಿ, ಕ್ರೀಡಾಳುಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : bike collide/ ಎಕ್ಟಿವಾಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ