ಭಟ್ಕಳ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ) police department) ಹಾಗೂ ಶಿರಾಲಿಯ ಜನತಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಶಿರಾಲಿಯ ಜನತಾ ವಿದ್ಯಾಲಯದಲ್ಲಿ ನಡೆದ ಮಾನವ ಕಳ್ಳಸಾಗಾಣಿಕೆ ತಡೆ ದಿನವನ್ನು (Anti-Human Trafficking Day ) ಹೆಚ್ಚುವರಿ ಸಿವಿಲ್ ಜಡ್ಜ್ (civil judge) ಮತ್ತು ಜೆಎಂಎಫ್ಸಿ (JMFC) ನ್ಯಾಯಾಧೀಶೆ ಅರ್ಪಿತಾ ಉದ್ಘಾ ಟಿಸಿದರು. ನಂತರ ಮಾತನಾಡಿದ ಅವರು ಮಾನವ ಕಳ್ಳಸಾಗಣೆ ತಡೆ ದಿನಾಚರಣೆಯ ಕುರಿತು ವಿವರಿಸಿದರು ಮತ್ತು ಮಾನವ ಕಳ್ಳಸಾಗಾಣಿಕೆಯನ್ನು ವಿಮುಕ್ತಗೊಳಿಸುವ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಾನವ ಕಳ್ಳಸಾಗಾಣಿಕೆ ತಡೆ ದಿನ (Anti-Human Trafficking Day ) ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವೇಂಕಟೇಶ ಮುರನಾಳ ಮಾತನಾಡಿ, ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದ ಸಾಮಾಜಿಕ ಜಾಲತಾಣಗಳ ಮುಖಾಂತರ ಇಂತಹ ಅಪರಾಧಗಳಲ್ಲಿ ತೊಂದರೆಗೊಳಗಾಗುತ್ತಾರೆ. ಇಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದನ್ನು ಎಲ್ಲರೂ ಸೇರಿ ಸಮಾಜದಿಂದ ದೂರಮಾಡಲು ಪ್ರಾ ಮಾಣಿಕ ಪ್ರಯತ್ನ ಮಾಡಬೇಕು ಎಂದರು.
Yoga Guru/ ಭಟ್ಕಳದ ಯೋಗ ಗುರುಗೆ ‘ಭಾರತೀಯ ಯೋಗ ರತ್ನ’ ಪ್ರಶಸ್ತಿ
ಜನತಾ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಹೆಗಡೆ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಭಟ್ಕಳ ವಕೀಲರ ಸಂಘದ ಅಧ್ಯಕ್ಷ ಈಶ್ವರ ಎಮ್ ನಾಯ್ಕ, ಸಹಾಯಕ ಸರಕಾರಿ ಅಭಿಯೋಜಕ ಶೇಖರ ಹರಿಕಾಂತ ಹಾಗೂ ಜನತಾ ವಿದ್ಯಾಲಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಆಶಾ ಕಲ್ಮನೆ ಉಪಸ್ಥಿತರಿದ್ದರು.


