ಬೈಂದೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ನವದೆಹಲಿಯಲ್ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ನಿಯೋಗ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ (Kolluru Corridor) ನಿರ್ಮಾಣ ಮಾಡಲು ಮನವಿ ಮಾಡಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇದನ್ನು ಒತ್ತಿ.
ಸುಮಾರು ೧೨೦೦ ವರ್ಷಗಳ ಇತಿಹಾಸವಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ ೧೦೦೦೦ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದನ್ನೂ ಓದಿ : ಧುಮ್ಮಿಕ್ಕುವ ಜಲಧಾರೆಗೆ ವಿದ್ಯುದ್ದೀಪ; ಹೊರಹರಿವು ಹೆಚ್ಚಳ
ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ (Kolluru Corridor) ನಿರ್ಮಾಣದ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣ ಪ್ರಸಾದ ಅಡ್ಯಂತಾಯ, ಬೈಂದೂರಿನ ವೆಂಕಟೇಶ್ ಕಿಣಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಭಟ್ಕಳದ ಸನಿಹ ವಿಮಾನ ನಿಲ್ದಾಣ ಆಗುತ್ತಾ?!