ಬೆಂಗಳೂರು : ಕರ್ನಾಟಕ (karnataka) ರಾಜ್ಯದ ಆರು ರಂಗಾಯಣ(Rangayana)ಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ ನೇಮಕಗೊಂಡಿದ್ದಾರೆ. ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ. ಕಾರ್ಕಳದ ಯಕ್ಷರಂಗಾಯಣದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ : ಭಟ್ಕಳದಲ್ಲಿ ಬೈಕ್ ರ್ಯಾಲಿ ಯಶಸ್ವಿ
ನೂತನ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣ(Rangayana)ಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Thangadagi) ಸೂಚಿಸಿದ್ದಾರೆ. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.