ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಹೆಬಳೆ ಗ್ರಾಮದ ಜಾಮಿಯಾಬಾದ್ ನಿವಾಸಿ ಅರ್ಭಾಜ್ ಖಾನ್ (೨೬) ಬಂಧಿತ (arrested) ಆರೋಪಿಯಾಗಿದ್ದಾನೆ. ಭಟ್ಕಳ (Bhatkal) ತಾಲೂಕಿನ ಸಾಗರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ವಿಚಿತ್ರವಾಗಿ ವರ್ತಿಸುತ್ತಿದ್ದನ್ನು ಪೊಲೀಸರು ಗಮನಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಯ ಬಾಯಿಂದ ಗಾಂಜಾ ವಾಸನೆ ಬಂದಿದೆ. ನಂತರ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

arrested/ ಕದ್ದ ಎತ್ತು ಸಾಗಿಸುತ್ತಿದ್ದ ಒಬ್ಬ ಬಂಧನ

ಆರೋಪಿಯನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತು ತಾಲೂಕು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸೈ ಭರಮಪ್ಪ ಬೆಳಗಲಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Khelo India/ ಖೇಲೋ ಇಂಡಿಯಾ ಅಸ್ಮಿತಾ ದಕ್ಷಿಣ ವಲಯ ಕಿಕ್ ಬಾಕ್ಸಿಂಗ್ ಲೀಗ್ ನಲ್ಲಿ ಭಟ್ಕಳದ ಮಹಿಳಾ ಪಟುಗಳ ಸಾಧನೆ