ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ವರಕೊಡ್ಲು ಮೈದಾನದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಭಟ್ಕಳ (Bhatkal) ಗ್ರಾಮೀಣ ಪೊಲೀಸರು ಆಟೋ ಚಾಲಕನನ್ನು (Auto driver) ಬಂಧಿಸಿದ್ದಾರೆ. ಬಂಧಿತನನ್ನು ಶಿರುಕುಳಿಹೊಂಡ ನಿವಾಸಿ, ಮೊಹಮ್ಮದ ಜಾಫರ್ ಮಗ ಮಹ್ಮದ ಅಖೀಲ್ (೨೫) ಎಂದು ಗುರುತಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಆರೋಪಿ ಯಾವುದೇ ಪರವಾನಗಿ ಇಲ್ಲದೆ ಸುಮಾರು ೧೨೯ ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹೧೫೦೦೦)ವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಆಟೋ ರಿಕ್ಷಾದಲ್ಲಿ ಸಂಗ್ರಹಿಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆಟೋ ಸಹಿತ ಚಾಲಕನನ್ನು (Auto driver) ವಶಕ್ಕೆ ಪಡೆದು ಗಾಂಜಾ ಜಪ್ತಿ ಮಾಡಿದ್ದಾರೆ.

tribute/ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ ಆರ್ ವಿ ಸರಾಫಗೆ  ನುಡಿನಮನ

ಈ ಸಂಬಂಧ ಆರೋಪಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಈ ಕಾರ್ಯಾಚರಣೆಯನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೋರಾಣಿ ನೇತೃತ್ವದಲ್ಲಿ, ಪಿಎಸ್‌ಐ (ತನಿಖೆ) ಭರಮಪ್ಪ ಬೆಳಗಲಿ ಹಾಗೂ ಪೊಲೀಸ್ ಸಿಬ್ಬಂದಿಯ ತಂಡ ಯಶಸ್ವಿಯಾಗಿ ನಡೆಸಿತು.

social concern/ ಸಾಮಾಜಿಕ ಕಾಳಜಿ ಮೆರೆದ ಭಟ್ಕಳ ತಹಶೀಲ್ದಾರ