ಭಟ್ಕಳ: ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೃತರನ್ನು ಶಿರಾಲಿಯ ಚಿತ್ರಾಪುರ ನಿವಾಸಿ ಶಂಕರ ತಂದೆ ನಾಗಪ್ಪ ದೇವಡಿಗ (೩೨) ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಗಳಿಂದ ಮನನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: Farewell ceremony/ ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ಶಿರಾಲಿ ಚಿತ್ರಾಪುರದಲ್ಲಿರುವ ಖಾಸಗಿ ಬ್ಯಾಂಕ್‌ನ ಹಿಂಭಾಗದ ವಾಶ್‌ರೂಮ್ ಪಕ್ಕದಲ್ಲಿನ ಪಾಕಾಶಿಯಲ್ಲಿ ನೈಲಾನ್ ದಾರದಿಂದ ಉರುಳು ಹಾಕಿಕೊಂಡ ಸ್ಥಿತಿಯಲ್ಲಿ ಶಂಕರ ಅವರ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೃತನ ಅಕ್ಕ ಶೋಭಾ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ: premier league/ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ – ಮನವಿ ತಂಡಕ್ಕೆ ಚಾಂಪಿಯನ್ ಕಿರೀಟ



