ಬೆಳಗಾವಿ (Belagavi): ಇಲ್ಲಿನ ರಿಸಾಲ್ದಾರ ಗಲ್ಲಿಯಲ್ಲಿರುವ ತಹಶೀಲ್ದಾರ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ತಹಶಿಲ್ದಾರ್ ಕಚೇರಿಯ ಎಫ್‌ಡಿಸಿ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದವರು. ಇವರು ತಹಶೀಲ್ದಾರ್ ಬಸವರಾಜ ನಾಗರಾಳರ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನಿನ್ನೆಯಷ್ಟೇ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ರುದ್ರಣ್ಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಬೆಳಗಾವಿ (Belagavi) ‌ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಂದ ಆದೇಶವಾಗಿತ್ತು. ಎಫ್‌ಡಿಸಿ ರುದ್ರಣ್ಣ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ‌ಸ್ಥಳಕ್ಕೆ ಕುಟುಂಬಸ್ಥರ ದೌಡಾಯಿಸಿದರು.  ರುದ್ರಣ್ಣ ಪತ್ನಿ ಗಿರಿಜಾ ಹಾಗೂ‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ಒಂದೇ ದಿನ ಎರಡು ಕಡೆ ಹೆಜ್ಜೇನು ದಾಳಿ