ಬೆಳಗಾವಿ (Belagavi Followup): ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ (Ganesh Procession) ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಕು ಇರಿದು ಎಸ್ಕೇಪ್ ಆಗ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಸಿಬ್ಬಂದಿ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೈಕ್ ಮೇಲೆ ಎಸ್ಕೇಪ್ ಆಗ್ತಿದ್ದ ಮೂವರನ್ನ ವಿಶ್ವೇಶ್ವರಯ್ಯ ನಗರದಲ್ಲಿ ಸೆರೆ ಹಿಡಿದಿದ್ದಾರೆ. ಇನ್ನುಳಿದವರ ಮಾಹಿತಿ ಸಂಗ್ರಹಿಸಿ ಬಂಧಿಸಲು ಒಂದು ತಂಡ ಕಾರ್ಯಪ್ರವೃತ್ತವಾಗಿದೆ.
ಇದನ್ನೂ ಓದಿ : ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಮೂವರಿಗೆ ಚೂರಿ ಇರಿತ
ಯಾವ ಕಾರಣಕ್ಕೆ ಚಾಕು ಇರಿದಿದ್ದು ಅಂತಾ ಬಂಧಿತರಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು(belagavi followup).
ಇದನ್ನೂ ಓದಿ : ಇತಿಹಾಸದ ಪುಟ ಸೇರಲಿದೆ ಕೊಂಕಣ ರೈಲ್ವೆ