ಭಟ್ಕಳ (Bhatkal) : ಧಾರವಾಡದ (Dharwad) ಕರ್ನಾಟಕ ವಿಶ್ವವಿದ್ಯಾಲಯವು (Karnataka University) ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ದೇಹದಾರ್ಢ್ಯ (Best Physic) ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ (Guru Sudhindra) ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕರ್ನಾಟಕ ವಿಶ್ವವಿದ್ಯಾಲಯದ (KUD) ವಿಶ್ವವಿದ್ಯಾಲಯ ಮಟ್ಟದ ದೇಹದಾರ್ಢ್ಯ (Best Physic) ಸ್ಪರ್ಧೆಯಲ್ಲಿ ವಿದ್ಯಾರ್ಥಿ  ಚೇತನ ನಾಯ್ಕ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಇವರು ಕೇರಳದ (Kerala) ಎರ್ನಾಕುಲಂ (Ernakulam) ಶ್ರೀ ಶಂಕರಾಚಾರ್ಯ ವಿಶ್ವವಿದ್ಯಾಲಯದಲ್ಲಿ (Sri Shankaracharya University) ಜರುಗುವ ಅಂತರ ವಿಶ್ವವಿದ್ಯಾಲಯ-ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ಬಿಸಿಎ ವಿದ್ಯಾರ್ಥಿ ಸಂದೀಪ ಎಂ ದೇವಾಡಿಗ  ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿವರ್ಗ, ಪಾಲಕರು, ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Pratibha Puraskar/ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ