ಭಟ್ಕಳ ಡೈರಿ ವರದಿ
ಭಟ್ಕಳ: ಭಗವದ್ಗೀತೆಯನ್ನು ಸರಿಯಾಗಿ ಅರ್ಥೈಸಿಕೊಂಡು ಅದರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಬದುಕಿನಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಲು ಸಾಧ್ಯ ಎಂದು ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ ನಾಯಕ ಹೇಳಿದರು.
ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಹಾಗೂ ಗಜಾನನ ಗಣಪತಿ ಕೊಲ್ಲೆ ರಾಯ್ಕರ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಬೈಂದೂರು, ಭಟ್ಕಳ, ಹೊನ್ನಾವರ, ಕುಮಟ ಹಾಗೂ ಅಂಕೋಲಾ ತಾಲೂಕುಗಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಆರನೇ ವರ್ಷದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಬಾರಿ ಸ್ಪರ್ಧೆಯನ್ನು ಒಟ್ಟು ೩೭ ವಿಭಾಗಗಳಲ್ಲಿ ಆಯೋಜಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಒಟ್ಟು ₹೧,೪೦,೦೦೦ ನಗದು ಬಹುಮಾನ ನೀಡಲಾಗುವುದು ಎಂದು ರಾಜೇಶ ನಾಯಕ ತಿಳಿಸಿದರು.
ಕಾರ್ಯಕ್ರಮದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ರಮೇಶ ಖಾರ್ವಿ ಮಾತನಾಡಿದರು. ದಿ ನ್ಯೂ ಇಂಗ್ಲೀಷ್ ಹೈಸ್ಕೂಲ್‌ನ ನಿವೃತ್ತ ಮುಖ್ಯಾಧ್ಯಾಪಕ ಗಣಪತಿ ಶಿರೂರು ಉಪಸ್ಥಿತರಿದ್ದರು. ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಭಾಗ ಸ್ವಾಗತಿಸಿದರು. ದಿ ನ್ಯೂ ಇಂಗ್ಲೀಷ್ ಹೈಸ್ಕೂಲ್‌ನ ಮುಖ್ಯಾಧ್ಯಾಪಕ ಶರತ್ ಗುನಗಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಾಧ್ಯಾಪಕಿ ರೂಪಾ ರಮೇಶ್ ವಂದಿಸಿದರು.
ಇದನ್ನೂ ಓದಿ :




