ಭಟ್ಕಳ (Bhatkal) : ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ (Durgaparameshwari) ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಕಾರ್ತಿಕ ಅಮವಾಸ್ಯೆಯಂದು ನಡಯುವ ಅಹೋರಾತ್ರಿ ಭಜನಾ (Bhajan) ಕಾರ್ಯಕ್ರಮಕ್ಕೆ ದೇವಸ್ಥಾನದ ಅರ್ಚಕ ವೇ.ಮೂ. ಮಂಜುನಾಥ ವಾಸುದೇವ ಭಟ್ಟ ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಂತರ ತಾಲೂಕಿನಂದಷ್ಟೇ ಅಲ್ಲದೇ ಬೇರೆ ಬೇರೆ ತಾಲೂಕುಗಳಿಂದ ಬಂದಿದ್ದ ಭಜನಾ ತಂಡಗಳು ಅತ್ಯಂತ ಸುಶ್ರಾವ್ಯವಾದ ಭಜನಾ ಹಾಡುಗಳೊಂದಿಗೆ ಶ್ರೀ ದೇವಿ ಸನ್ನಿಧಿಯಲ್ಲಿ ತಮ್ಮ ತಮ್ಮ ಸೇವಾ ಕಾರ್ಯಗಳನ್ನು ಮಾಡಿದರು. ದುರ್ಗಾಪರಮೇಶ್ವರಿ (Durgaparameshwari) ದೇವಸ್ಥಾನದ ಅರ್ಚಕರು, ನಕಟಪೂರ್ವ ಆಡಳಿತ ಮಂಡಳಿಯ ಸದಸ್ಯರು, ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದ ಸದಸ್ಯರು, ಶ್ರೀ ದೇವರ ಭಕ್ತರು ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು. ಶುಕ್ರವಾರ ಬೆಳಿಗ್ಗೆ ೬.೪೧ಕ್ಕೆ ಆರಂಭವಾದ ಭಜನಾ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ಶ್ರೀ ದೇವರ ಬೆಳಿಗ್ಗೆಯ ಪೂಜೆಯ ತನಕ ನಡೆಯಿತು.

ಇದನ್ನೂ ಓದಿ : ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುರಸ್ಕಾರ