ಭಟ್ಕಳ ಡೈರಿ ವರದಿ
ಭಟ್ಕಳ: ಜಾಲಿ ಗ್ರಾಮದ ಪ್ರತಿಭೆ ಭಾರತಿ ನಾಯ್ಕ ಅವರು ಡಾಕ್ಟರೇಟ್ ಪದವಿ ಪಡೆದು ಗ್ರಾಮಕ್ಕೆ ಕೀರ್ತಿ ತಂದಿದ್ದು, ಅವರ ಶೈಕ್ಷಣಿಕ ಸಾಧನೆಗೆ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ (ರಿ.) ವತಿಯಿಂದ ಗೌರವ ಸಲ್ಲಿಸಲಾಯಿತು.
ಯೆನೆಪೋಯಾ ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ ಭಾರತಿ ನಾಯ್ಕ ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಜಾಲಿ ಗ್ರಾಮದ ತಿಮ್ಮಪ್ಪ ಹಾಗೂ ಲಕ್ಷ್ಮೀ ದಂಪತಿಯ ಪುತ್ರಿಯಾಗಿರುವ ಅವರು, ‘Molecular Characterization of the Human Fungal Pathogen Malassezia’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮಾನವರಲ್ಲಿ ಕಂಡುಬರುವ ಮಲಾಸೆಜಿಯಾ ಶಿಲೀಂಧ್ರದ ಆಣ್ವಿಕ ಗುಣಲಕ್ಷಣಗಳ ಅಧ್ಯಯನಕ್ಕೆ ಸಂಬಂಧಿಸಿದ ಈ ಸಂಶೋಧನೆಯು ಅವರ ವೈಜ್ಞಾನಿಕ ಆಸಕ್ತಿ ಮತ್ತು ಪರಿಶ್ರಮವನ್ನು ಪ್ರತಿಬಿಂಬಿಸಿದೆ. ಈ ಸಾಧನೆಯು ಜಾಲಿ ಗ್ರಾಮಕ್ಕೆ ಹೆಮ್ಮೆಯ ವಿಷಯವಾಗಿದ್ದು, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುನ್ನಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಭಾರತಿ ಅವರ ಸಾಧನೆ ಪ್ರೇರಣೆಯಾಗಲಿದೆ ಎಂದು ಫೌಂಡೇಶನ್ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಫೌಂಡೇಶನ್ನ ಪದಾಧಿಕಾರಿಗಳು ಭಾರತಿ ನಾಯ್ಕ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಮುಂದಿನ ದಿನಗಳಲ್ಲಿಯೂ ಅವರು ಶೈಕ್ಷಣಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಹಾರೈಸಿದರು. ಫೌಂಡೇಶನ್ ಅಧ್ಯಕ್ಷ ವಸಂತ ನಾಯ್ಕ, ಉಪಾಧ್ಯಕ್ಷ ವೆಂಕಟೇಶ ನಾಯ್ಕ, ದೇವರಾಜ ಮೊಗೇರ, ಪ್ರಧಾನ ಕಾರ್ಯದರ್ಶಿ ಮಾರುತಿ ನಾಯ್ಕ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಶಿರಾಲಿ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ಆರೋಪ: ೨೪ ಗಂಟೆಯೊಳಗೆ ಬಂಧನಕ್ಕೆ ವೈದ್ಯಾಧಿಕಾರಿಗಳ ಆಗ್ರಹ
ಭಟ್ಕಳದಲ್ಲಿ ಕರಾಟೆ ಕ್ರೀಡಾಕೂಟದ ಕಣ ಕಳೆ: ೧೫೦ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಪ್ರದರ್ಶನ



