ಭಟ್ಕಳ (Bhatkal) : ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ ನಿವಾಸಿಯೋರ್ವ ನೈಲಾನ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ (complaint) ದಾಖಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕೂಲಿ ಕೆಲಸ ಮಾಡಿಕೊಂಡಿದ್ದ ದುರ್ಗಯ್ಯ ಬೆರ್ಮು ದೇವಾಡಿಗ (೬೪) ಸಾವಿಗೆ ಶರಣಾದವರು. ಇವರು ವಿಪರೀತ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಫೆ.೧೩ರಂದು ರಾತ್ರಿ ೮.೪೦ರಿಂದ ೯ರ ನಡುವಿನ ಅವಧಿಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಮಲಗುವ ಕೋಣೆಯ ಪಕಾಶಿಗೆ ನೈಲಾನ್ ಹಗ್ಗದ ಒಂದು ತುದಿಯನ್ನು ಕಟ್ಟಿ ಇನ್ನೊಂದು ತುದಿಯನ್ನ ತಮ್ಮ ಕುತ್ತಿಗೆಗೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಅಟೋ ರೀಕ್ಷಾದ ಮೇಲೆ ಭಟ್ಕಳ (Bhatkal) ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಸ್ಪತ್ರೆ ತರುವ ಪೂರ್ವದಲ್ಲಿಯೇ ಮೃತಪಟ್ಟಿರುತ್ತಾರೆ ಅಂತ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಮೃತರ ಮಗ ಗಜಾನನ ದೇವಾಡಿಗ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : Lokayukta raid/ ಕೆಯುಡಿಎ ಅಧಿಕಾರಿ ಬಂಧನ