ಭಟ್ಕಳ ಡೈರಿ ವರದಿ
ಭಟ್ಕಳ: ಮಾರಾಟಕ್ಕೆಂದು ಸ್ಕೂಟಿಯಲ್ಲಿ ಗಾಂಜಾ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಅಕ್ಟೋಬರ್ ೨ರಂದು ಹೆಬಳೆ ಗ್ರಾಮದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳದ ಬೆಂಡೇಖಾನ, ಮೂಸಾನಗರದ ನಿವಾಸಿ ಮೊಹಮ್ಮದ್ ಸಾಯಿಮ್ (೩೧) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಹೆಬಳೆ ಗ್ರಾಮದ ಫಿರ್ದೋಸ್ ನಗರದ ಕೋಳಿ ಫಾರ್ಮ್ ಸಮೀಪ ಅಕ್ಟೋಬರ್ ೨ರಂದು ಸಂಜೆ ೬.೩೦ರ ವೇಳೆಗೆ ದಾಳಿ ನಡೆಸಲಾಗಿತ್ತು. ಈ ವೇಳೆ ಆರೋಪಿ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸ್ಕೂಟಿಯಲ್ಲಿ ಸಂಗ್ರಹಿಸಿಟ್ಟಿದ್ದ ಎನ್ನಲಾಗಿದೆ. ದಾಳಿಯ ವೇಳೆ ಒಟ್ಟು ೮೧೬ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ₹೮೧,೬೦೦ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರುತಿ ಸುಜುಕಿ ಬರ್ಗ್ಮನ್ ಸ್ಕೂಟಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ನಿಷೇಧಿತ ಮಾದಕ ವಸ್ತುವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನಯ್ಯ ಕೊರಾಣಿ ಸರ್ಕಾರದ ಪರವಾಗಿ ದೂರು ನೀಡಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ :


