ಭಟ್ಕಳ : ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ಕೈಗೊಂಡಿರುವ ಮೈಸೂರು ಚಲೋ(Mysuru chalo) ಪಾದಯಾತ್ರೆಯಲ್ಲಿ ಭಟ್ಕಳದ ಬಿಜೆಪಿ ಮುಖಂಡರು, ಕಾರ್ಯಕ‍ರ್ತರು ಪಾಲ್ಗೊಂಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಭಟ್ಕಳ ಮಾಜಿ ಶಾಸಕ ಸುನೀಲ ನಾಯ್ಕ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ ಆಸರಕೇರಿ, ತಾಲೂಕು ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಶಿರಾಲಿ ಗ್ರಾಪಂ ಅಧ್ಯಕ್ಷ ಭಾಸ್ಕರ ದೈಮನೆ, ಶ್ರೀಧರ ನಾಯ್ಕ ಮತ್ತಿತರರು ಪಾಲ್ಗೊಂಡಿದ್ದಾರೆ. ಇನ್ನು ನೆರೆಯ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ, ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ, ಪ್ರಶಾಂತ ನಾಯ್ಕ ಕುಮಟಾ ಮತ್ತಿತರ ಮುಖಂಡರು, ಕಾರ್ಯಕ‍ರ್ತರು (Mysuru chalo) ಪಾದಯಾತ್ರೆಯಲ್ಲಿ ಹೆಜ್ಜೆಹಾಕುತ್ತಿದ್ದಾರೆ.

ಇದನ್ನೂ ಓದಿ : ಕೆ.ಎನ್‌.ನಾಯ್ಕ ಮನೆಗೆ ಸಚಿವ ಭೇಟಿ