ಭಟ್ಕಳ ಡೈರಿ ವರದಿ
ಭಟ್ಕಳ: ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಉಪ ಮಹಾನಿರೀಕ್ಷಕ ಚೇತನ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಳಮಿ ಪ್ರದೇಶದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಸಮೀಪದ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಂದ ಪ್ರಕರಣಕ್ಕೆ ಸಂಬಂಧಿಸಿದ ಘಟನೆಗಳ ಕುರಿತು ಮಾಹಿತಿ ಪಡೆದುಕೊಂಡರು. ತನಿಖೆಯ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರಕರಣದ ಹಿನ್ನೆಲೆಯಲ್ಲಿ ಮುಂದಿನ ತನಿಖೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅಗತ್ಯವಾದ ಸೂಕ್ತ ಸೂಚನೆಗಳನ್ನು ಡಿಐಜಿ ಚೇತನ್ ಆರ್ ನೀಡಿದರು. ಘಟನೆಯ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇದನ್ನೂ ಓದಿ:
ಭಟ್ಕಳ ಕಲ್ಲು ತೂರಾಟ ಪ್ರಕರಣ: ಜೀವನ ನಾಯ್ಕ, ದೇವರಾಜ ನಾಯ್ಕಗೆ ಜಾಮೀನು
ಹಿಂದೂ ಯುವಕರ ಬಂಧನ: ಭಟ್ಕಳ ಶಹರ ಠಾಣೆಗೆ ಮುತ್ತಿಗೆ
ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ: ದೂರು-ಪ್ರತಿ ದೂರು ದಾಖಲು

