ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ಫಿರ್ದೋಸ್ ನಗರ ರಸ್ತೆಯಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ೨೯ ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬದ್ರಿಯಾ ಕಾಲೋನಿ ನಿವಾಸಿ ಅಬ್ದುಲ್ ಅದ್ನಾನ (೨೯) ಆರೋಪಿಯಾಗಿದ್ದು, ವೃತ್ತಿಯಲ್ಲಿ ಚಾಲಕರಾಗಿದ್ದಾರೆ.

ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ ೧೬ರಂದು ಬೆಳಿಗ್ಗೆ ಸುಮಾರು ೮.೪೫ರ ವೇಳೆಗೆ ಫಿರ್ದೋಸ್ ನಗರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಾದಕ ವಸ್ತು ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆತನನ್ನು ವಿಚಾರಿಸಿದಾಗ ಬಾಯಿಯಿಂದ ಗಾಂಜಾದ ಘಾಟು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದಾರೆ.

ಇದನ್ನೂ ಓದಿ :

ಭಟ್ಕಳ ಮಾರಿಯಮ್ಮನ ವಿಸರ್ಜನಾ ಸ್ಥಳ, ಮಾರ್ಗದ ನೋಂದಣಿಗೆ ದೇವಸ್ಥಾನ ಟ್ರಸ್ಟ್ ಮನವಿ

ಉಚ್ಚಿಲ ದಸರಾ ವೇದಿಕೆಯಲ್ಲಿ ಭಟ್ಕಳದ ನಿನಾದ ಕಲ್ಚರಲ್ ಅಕಾಡೆಮಿಯ ಭಕ್ತಿಗಾನಾಮೃತ; ಮಂತ್ರಮುಗ್ಧರಾದ ಭಕ್ತರು

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಹೆಮ್ಮೆ: ಬಿ.ಕಾಂನಲ್ಲಿ ಪ್ರಥಮ ರ‍್ಯಾಂಕ್, ಬಿಬಿಎಯಲ್ಲಿ ಐದನೇ ರ‍್ಯಾಂಕ್