ಭಟ್ಕಳ ಡೈರಿ ವರದಿ

ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ೧೯ ವರ್ಷದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮುಂಡಗೋಡ ತಾಲೂಕಿನ ಕಾತೂರ-ಮರಗಡಿ ನಿವಾಸಿ, ಪ್ರಸ್ತುತ ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಹನಿಫಾಬಾದದಲ್ಲಿ ವಾಸವಾಗಿರುವ ಸಮಿಉಲ್ಲಾ ಗಫಾರಸಾಬ ಹುಲ್ಲತ್ತಿ ಎಂದು ಗುರುತಿಸಲಾಗಿದೆ.

ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ ೫ರಂದು ಸಂಜೆ ಸುಮಾರು ೫.೩೦ರ ವೇಳೆಗೆ ಹೆಬಳೆ ಗ್ರಾಮದ ಹನಿಫಾಬಾದ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ. ಆತನನ್ನು ಮಾತನಾಡಿಸಿದಾಗ ಬಾಯಿಯಿಂದ ಗಾಂಜಾ ಮಾದರಿಯ ಘಾಟು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಾಂಜಾ ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ಕಾರವಾರ–ಇಳಕಲ್ ರಸ್ತೆಯಲ್ಲಿ ಅಪಾಯದ ಸಂಚಾರ: ಶೀಘ್ರ ದುರಸ್ತಿಗೆ ಮನವಿ

ಭಟ್ಕಳಕ್ಕೆ ಉಪ ಬಂಧಿಖಾನೆ ಯಾವಾಗ? ಪೊಲೀಸ್ ವ್ಯವಸ್ಥೆ, ಬಂಧಿತರ ಕುಟುಂಬಗಳ ಸಂಕಷ್ಟಕ್ಕೆ ಪರಿಹಾರ ಬೇಕು