ಭಟ್ಕಳ ಡೈರಿ ವರದಿ
ಭಟ್ಕಳ: ವಾಣಿಜ್ಯ ಕ್ಷೇತ್ರದಲ್ಲಿ ಉನ್ನತ ವೃತ್ತಿಪರ ಶಿಕ್ಷಣದತ್ತ ಹೆಜ್ಜೆಯಿಟ್ಟಿರುವ ಭಟ್ಕಳದ ಶ್ರೀಗುರು ಸುಧೀಂದ್ರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ICAI) ನಡೆಸಿದ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ಕಾಲೇಜಿನ ಬಿಕಾಂ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಮನೀಷಾ ವಿ. ಮೊಗೇರ ಅವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯ ಗ್ರೂಪ್-೧ ಹಾಗೂ ಗ್ರೂಪ್-೨ ಎರಡರಲ್ಲೂ ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ಪರೀಕ್ಷೆಯ ಗ್ರೂಪ್-೧ರಲ್ಲಿ ಸಂದೇಶ ಆಚಾರ್ಯ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಮೇಘಾ ಎನ್. ನಾಯ್ಕ ಅವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳ ಈ ಶೈಕ್ಷಣಿಕ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಶಾನಭಾಗ, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಸಿಎ-ಸಿಎಸ್ ಸಂಯೋಜಕ ಪಿ.ಎಸ್. ಹೆಬ್ಬಾರ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಕ್ಯಾಮೆರಾ ಮೂಲಕ ಅಪರಾಧ ತನಿಖೆಯ ಪಾಠ: ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಹೆಮ್ಮೆ: ಬಿ.ಕಾಂನಲ್ಲಿ ಪ್ರಥಮ ರ್ಯಾಂಕ್, ಬಿಬಿಎಯಲ್ಲಿ ಐದನೇ ರ್ಯಾಂಕ್



