ಭಟ್ಕಳ ಡೈರಿ ವರದಿ

ಭಟ್ಕಳ: ಮುರುಡೇಶ್ವರದಲ್ಲಿ ನಡೆದ ಭಟ್ಕಳ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಟ್ಕಳ ನಗರದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮುರುಡೇಶ್ವರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಈ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಭಾಗಗಳ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಪ್ರಥಮ ಪಿಯುಸಿ ವಿಭಾಗದಲ್ಲಿ ಸಿಂಚನಾ ರಾಜು ನಾಯ್ಕ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಶ್ರಾವ್ಯಾ ಅಶೋಕ ಆಚಾರಿ ಮತ್ತು ಇಬ್ರಾಹಿಂ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕೀರ್ತನ ಕಾಯ್ಕಿಣಿ ವಿಜ್ಞಾನ ಮಾದರಿ ತಯಾರಿಕೆಯಲ್ಲಿ, ಅನನ್ಯಾ ನಾಯ್ಕ ಇಂಗ್ಲಿಷ್ ಪ್ರಬಂಧದಲ್ಲಿ ಹಾಗೂ ಅನನ್ಯಾ ಕಡ್ಲೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಸುದೀಪ ಆಚಾರಿ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದರೆ, ವಿಹಾ ವೀರೇಂದ್ರ ಶಾನಭಾಗ ಭಾವಗೀತೆ, ಸುಪ್ರೀತಾ ಮರಾಠಿ ಕನ್ನಡ ಪ್ರಬಂಧ, ಹರ್ಷಿತಾ ಏಕಪಾತ್ರಾಭಿನಯ ಹಾಗೂ ಪೂರ್ವಿತಾ ಶೆಟ್ಟಿ ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ವಿಭಾಗದಲ್ಲಿ ವಿಕಾಸ ವಾಸು ಮೊಗೇರ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಹಾಗೂ ಭರತಕುಮಾರ ನಾಯ್ಕ ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ನಿಧಿ ಆಚಾರ್ಯ ಜನಪದ ನೃತ್ಯದಲ್ಲಿ ಮತ್ತು ವಸುಧಾ ಹೆಬ್ಬಾರ ಭಾವಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರೆ, ಲಿಖಿತಾ ನಾಯ್ಕ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಶಾನಭಾಗ, ಕಾಲೇಜಿನ ಪ್ರಾಂಶುಪಾಲ ಡಾ. ವೀರೇಂದ್ರ ವಿ. ಶಾನಭಾಗ, ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕರಾದ ಉಪನ್ಯಾಸಕಿ ಸಂಕಲ್ಪ ಆರ್., ಉಪನ್ಯಾಸಕ ವಿಲಿಯಂ ಫರ್ನಾಂಡಿಸ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಮುರುಡೇಶ್ವರದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಯಶಸ್ವಿ

ಬೆಳಗಾವಿ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತೆರ್ನಮಕ್ಕಿ ಕೆಪಿಎಸ್ ಶಾಲೆಗೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ