ಭಟ್ಕಳ: ೨೦೨೬–೨೭ನೇ ಸಾಲಿನ ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ (AB-RK project) ಯೋಜನೆಯ ರಾಜ್ಯಮಟ್ಟದ ಪ್ರಗತಿ ಮೌಲ್ಯಮಾಪನದಲ್ಲಿ ಭಟ್ಕಳ (Bhatkal) ತಾಲೂಕು ಆಸ್ಪತ್ರೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಪ್ರಥಮ ಹಾಗೂ ರಾಜ್ಯದಲ್ಲಿ ೩೭ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ (AB-RK project) ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅರ್ಹ ಫಲಾನುಭವಿಗಳ ನೋಂದಣಿ, ಚಿಕಿತ್ಸಾ ಸೌಲಭ್ಯಗಳ ಸಮರ್ಪಕ ಬಳಕೆ ಹಾಗೂ ಸರ್ಕಾರಿ ಆರೋಗ್ಯ ಯೋಜನೆಗಳ ಪ್ರಯೋಜನಗಳನ್ನು ಜನರಿಗೆ ತಲುಪಿಸುವಲ್ಲಿ ಆಸ್ಪತ್ರೆ ತೋರಿದ ಕಾರ್ಯಕ್ಷಮತೆಗೆ ಈ ಸಾಧನೆ ಲಭಿಸಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.

Various problems/ ಆಜಾದ್ ನಗರದಲ್ಲಿ ನಾನಾ ಸಮಸ್ಯೆ: ಏಳನೇ ಕ್ರಾಸ್ ನಿವಾಸಿಗಳ ಪರದಾಟ

ಈ ಕುರಿತು ಮಾತನಾಡಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ಅರುಣ ಕುಮಾರ, “ಆಸ್ಪತ್ರೆಯ ಎಲ್ಲಾ ವೈದ್ಯರು, ಶುಶ್ರೂಷಕರು, ವೈದ್ಯಕೀಯ ಮತ್ತು ವೈದ್ಯಕೇತರ ಸಿಬ್ಬಂದಿ, ಆಡಳಿತ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ಪ್ರತಿಯೊಬ್ಬ ಸಿಬ್ಬಂದಿಯ ಸಮರ್ಪಿತ ಸೇವೆ ಮತ್ತು ತಂಡದ ಕಾರ್ಯವೈಖರಿಯೇ ಈ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದೆ” ಎಂದು ಹೇಳಿದರು.

Zero FIR/ ಮೂವರ ವಿರುದ್ಧ ಜೀರೋ ಎಫ್‌ಐಆರ್: ಏನಿದು ಪ್ರಕರಣ?

“ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಮತ್ತು ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಸೌಲಭ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಆಸ್ಪತ್ರೆ ಮುಂದೆಯೂ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರ ಸಹಕಾರದಿಂದ ಇನ್ನಷ್ಟು ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ” ಎಂದು ಅವರು ತಿಳಿಸಿದರು.

Case registered/ ಪತಿ ಸೇರಿದಂತೆ ಕುಟುಂಬದ ಐವರ ವಿರುದ್ಧ ಕೇಸು ದಾಖಲಿಸಿದ ಮಹಿಳೆ