ಭಟ್ಕಳ (Bhatkal) : ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ (BEd College) ೨೦೨೩-೨೦೨೪ ನೇ ಶೈಕ್ಷಣಿಕ ಸಾಲಿನ ಬಿ.ಎಡ್. ೪ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವು ಶೇಕಡಾ ೧೦೦ರಷ್ಟು ಆಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭವ್ಯಾ ಕೃಷ್ಣಾ ಕುರಾಡೆ ೯೫.೬೭% ಅಂಕಗಳೊಂದಿಗೆ ಪ್ರಥಮ, ಪ್ರೀತಿ ಮಂಜುನಾಥ ಖಾರ್ವಿ (೯೪.೧೭%) ದ್ವಿತೀಯ ಹಾಗೂ ಅಶ್ವಿನಿ ಹನುಮಂತ ನಾಯ್ಕ ೯೩.೮೩% ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿ ಆರ್. ಜಿ.ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಬಿ ಎಡ್ ಕಾಲೇಜ್ (BEd College) ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಬಾಗ ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ಶ್ರದ್ಧಾ ಭಕ್ತಿ ಸಂಭ್ರಮದ ಕೋಕ್ತಿ ಜಾತ್ರೆ ಸಂಪನ್ನ